ನವದೆಹಲಿ : ಭಾರತದ ಆರ್ಥಿಕ ಸುಧಾರಣೆಯ ಹರಿಹಾರ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏಮ್ಸ್ ಆಸ್ಪತ್ರೆಯಲ್ಲಿ ತಮ್ಮ 92 ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ಸಂಜೆ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 8 ಎಂಟು ಗಂಟೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು,ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ 9.51 ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.2004 ರಿಂದ 2014 ರವರೆಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ 33 ವರ್ಷಗಳ ನಂತರ ರಾಜ್ಯಸಭೆಯಿಂದ ನಿವೃತ್ತರಾಗುವ ಮೂಲಕ ರಾಜಕೀಯದಿಂದ ದೂರ ಸರಿದಿದ್ದರು.ಐದು ಅವಧಿಗೆ ಮೇಲ್ಮನೆಯಲ್ಲಿ ಅಸ್ಸಾಂ ಅನ್ನು ಪ್ರತಿನಿಧಿಸಿದ್ದ ಅವರು 2019 ರಲ್ಲಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶಿಸಿದ್ದರು.
ಇತ್ತ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಹುಲ್ ಗಾಂಧೀ,ಮಲ್ಲಿಕಾರ್ಜುನ್ ಖರ್ಗೆ ವಿಶೇಷ ವಿಮಾನದಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಈಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇತ್ತ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಹುಲ್ ಗಾಂಧೀ, ಮಲ್ಲಿಕಾರ್ಜುನ್ ಖರ್ಗೆ ವಿಶೇಷ ವಿಮಾನದಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಈಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಡಾ.ಮನಮೋಹನ್ ಸಿಂಗ್ ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿ, ಅವರು 2004 ರಿಂದ 2014 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಯನ್ನು ಅಲಂಕಾರಿಸದರು ಮತ್ತು ಮಾಜಿ ಪ್ರಧಾನಮಂತ್ರಿ ನರಸಿಂಹ ರಾವ್ ಅವರ ಆರ್ಥಿಕ ಸಲಹೆಗಾರರಾದರು.
ಭಾರತೀಯ ರಿಸರ್ವ್ ಬ್ಯಾಂಕ್ , ನಿರ್ದೇಶಕರಾಗಿ (1976-80) ಮತ್ತು ಗವರ್ನರ್ (1982–85) ಸೇವೆ ಸಲ್ಲಿಸಿದ್ದರು.ಹಣಕಾಸು ಸಚಿವಾಲಯದ ಮುಖ್ಯ ಆರ್ಥಿಕ ಸಲಹೆಗಾರರಾಗಿ 1972 ರಲ್ಲಿ ಬಡ್ತಿ ಪಡೆದರು. UNCTAD ಸೆಕ್ರೆಟರಿಯೇಟ್‌ನಲ್ಲಿ ಅವರನ್ನು ದಕ್ಷಿಣ ಆಯೋಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
1990 ರಿಂದ ಜಿನೀವಾ ಇದರ ಜೊತೆಗೆ, ಡಾ ಸಿಂಗ್ ಅವರು ಹಣಕಾಸು ಸಚಿವಾಲಯದ ಕಾರ್ಯದರ್ಶಿ, ಯೋಜನಾ ಆಯೋಗದ ಉಪಾಧ್ಯಕ್ಷ, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ ಸ್ಥಾನಗಳನ್ನು ಸಹ ನಿರ್ವಹಿಸಿದ್ದರು.ಮೇ 2004 ರ ಸಂಸತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸಿತು. ಕಾಂಗ್ರೆಸ್‌ನ ನಾಯಕಿ, ಸೋನಿಯಾ ಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ನಿರಾಕರಿಸಿದರು, ಬದಲಿಗೆ ಸಿಂಗ್ ಅವರನ್ನು ಹುದ್ದೆಗೆ ಶಿಫಾರಸು ಮಾಡಿದ್ದರು.
ಭಾರತದ ಹೆಚ್ಚುತ್ತಿರುವ ಇಂಧನ ಬೇಡಿಕೆಗಳನ್ನು ಪೂರೈಸುವ ಪ್ರಯತ್ನದಲ್ಲಿ, ಸಿಂಗ್ 2005 ರಲ್ಲಿ US ಅಧ್ಯಕ್ಷ ಜಾರ್ಜ್ W. ಬುಷ್ ಅವರೊಂದಿಗೆ ಪರಮಾಣು ಸಹಕಾರ ಒಪ್ಪಂದಕ್ಕಾಗಿ ಮಾತುಕತೆ ನಡೆಸಿದ್ದರು.ಮೇ 2009 ರ ಸಂಸತ್ತಿನ ಚುನಾವಣೆಯಲ್ಲಿ, ಕಾಂಗ್ರೆಸ್ ಶಾಸಕಾಂಗದಲ್ಲಿ ತನ್ನ ಸ್ಥಾನಗಳನ್ನು ಹೆಚ್ಚಿಸಿತು ಮತ್ತು ಸಿಂಗ್ ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
2014 ರ ಆರಂಭದಲ್ಲಿ ಸಿಂಗ್ ಅವರು ಲೋಕಸಭೆಗೆ ನಡೆಯುವ ಚುನಾವಣೆಯಲ್ಲಿ ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಲು ಬಯಸುವುದಿಲ್ಲ ಎಂದು ಘೋಷಿಸಿದರು. ಮೇ 26ರಂದು ಬಿಜೆಪಿಯ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಅವರು ಅಧಿಕಾರ ತೊರೆದಿದ್ದರು
ಮನಮೋಹನ್ ಸಿಂಗ್ ಅವರಿಗೆ ಅಣ್ಣಾಸಾಹೇಬ್ ಚಿರ್ಮುಲೆ ಪ್ರಶಸ್ತಿಯನ್ನು ಡಬ್ಲ್ಯು.ಎಲ್.ಜಿ. ಅಲಿಯಾಸ್ ಅಣ್ಣಾಸಾಹೇಬ್ ಚಿರ್ಮುಲೆ ಟ್ರಸ್ಟ್ ಅನ್ನು ಯುನೈಟೆಡ್ ವೆಸ್ಟರ್ನ್ ಬ್ಯಾಂಕ್ ಲಿಮಿಟೆಡ್, ಸತಾರಾ, ಮಹಾರಾಷ್ಟ್ರದಿಂದ ನೀಡಲಾಗಿತ್ತು. 1999 ಮನಮೋಹನ್ ಸಿಂಗ್ ಅವರು ಶ್ರೇಷ್ಠತೆಗಾಗಿ HH ಕಂಚಿ ಶ್ರೀ ಪರಮಾಚಾರ್ಯ ಪ್ರಶಸ್ತಿಯನ್ನು ಪಡೆದರು.
1999 ಮನಮೋಹನ್ ಸಿಂಗ್ ಅವರು ನ್ಯಾಷನಲ್ ಅಕಾಡೆಮಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ನವದೆಹಲಿಯ ಫೆಲೋ ಪಡೆದರು. ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.
ಮನಮೋಹನ್ ಸಿಂಗ್ ಅವರು 1964 ರಲ್ಲಿ ಇಂಡಿಯಾಸ್ ಎಕ್ಸ್‌ಪೋರ್ಟ್ ಟ್ರೆಂಡ್ಸ್ ಮತ್ತು ಪ್ರಾಸ್ಪೆಕ್ಟ್ಸ್ ಫಾರ್ ಸೆಲ್ಫ್-ಸಸ್ಟೈನ್ಡ್ ಗ್ರೋತ್ ಎಂಬ ಪುಸ್ತಕವನ್ನು ಬರೆದರು. ಅವರು ಅರ್ಥಶಾಸ್ತ್ರದ ನಿಯತಕಾಲಿಕಗಳ ಶ್ರೇಣಿಯಲ್ಲಿ ಪ್ರಕಟವಾದ ಅನೇಕ ಲೇಖನಗಳನ್ನು ಸಹ ಬರೆದಿದ್ದಾರೆ.
ಭಾರತದ ಆರ್ಥಿಕ ಉದಾರೀಕರಣದ ವಾಸ್ತುಶಿಲ್ಪಿ ಎಂಬ ಬಿರುದನ್ನು ಗಳಿಸಿದವರು ಮನಮೋಹನ್‌ಸಿಂಗ್. ಕಾಂಗ್ರೆಸ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಕಾಂಗ್ರೆಸ್‌ನಿಂದಲೇ ಪ್ರಧಾನ ಮಂತ್ರಿ ಕೂಡ ಆಗಿದ್ದರು. 10 ವರ್ಷಗಳ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದ್ದರಿ. ಉದಾರೀಕರಣಗೊಳಿಸುವ ಗುರಿಯನ್ನು ಹೊಂದಿದ್ದರು.
ಪಂಜಾಬ್‌ನಲ್ಲಿ ಸೆಪ್ಟೆಂಬರ್ 26, 1932ರಂದು ಜನಿಸಿದರು. ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿಯಾಗಿ ಮನಮೋಹನ್ ಸಿಂಗ್ 2004ರಿಂದ 2014ರ ವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಏಕೈಕ ಅಲ್ಪಸಂಖ್ಯಾತರೊಬ್ಬರು ಅಂದ್ರೆ ಸಿಖ್ ಸಮುದಾಯದವರು ಪ್ರಧಾನಮಂತ್ರಿಯಾಗಿರೋ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.
ಮನಮೋಹನ್ ಸಿಂಗ್ ಅವರು ಚಂಡೀಗಢದ ವಿಶ್ವವಿದ್ಯಾಲಯ ಮತ್ತು ಗ್ರೇಟ್ ಬ್ರಿಟನ್ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವ್ಯಾಂಸಗ ಮಾಡಿದ್ರು. ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದರು. 1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಗಳ ಸರಣಿಗೆ ಹೆಸರುವಾಸಿಯಾಗಿದ್ದರು. ಮನಮೋಹನ್ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕರಾಗಿ (1976–80) ಹಾಗೂ ಆರ್‌ಬಿಐ ಗವರ್ನರ್ (1982–85) ಸೇವೆ ಸಲ್ಲಿಸಿದ್ದರು.
ಮೇ 2009 ಸಂಸತ್ತಿನ ಚುನಾವಣೆಯಲ್ಲಿ ಎರಡನೇ ಬಾರಿ ಪ್ರಧಾನ ಮಂತ್ರಿಯಾದರು. 2014ರ ಲೋಕಾಸಭೆ ಚುನಾವಣೆಗೂ ಮುನ್ನ ನಾನು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗೋದಿಲ್ಲ ಅಂತ ಹೇಳಿದ್ದರಂತೆ.ಭಾರತದ ಆರ್ಥಿಕ ಸ್ಥಿತಿ ಕೂಡ, ಮನಮೋಹನ್ ಸಿಂಗ್‌ರ ಕಾಲದಲ್ಲಿ ಸಾಕಷ್ಟು ದೊಡ್ಡ ಸುಧಾರಣೆ ಕಂಡಿತ್ತು. ಆರ್ಥಿಕ ಚತುರ ಅಂತಲೇ ಎಲ್ಲರೂ ಕರೆಯುತ್ತಿದ್ದರು. ಆದರೆ ವಯೋಸಹಜ ಕಾಯಿಲೆಯಿಂದ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.