ಕಬ್ಬಿನ ದರ ನಿರ್ಧರಿಸದಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ

Social Share

ಬೆಂಗಳೂರು,ಡಿ.18- ಕಬ್ಬಿನ ಎಫ್ಆರ್ಪಿ ದರ ಏರಿಕೆ, ಕಟಾವ ಕೂಲಿ ಸಾಗಾಣಿಕೆ ವೆಚ್ಚ ಕಡಿತ ಮಾಡುವ ಬಗ್ಗೆ ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದಾರೆ. ಅದರಂತೆ 23ರ ವಿಶ್ವ ರೈತ ದಿನದ ಆಚರಣೆಯ ಒಳಗೆ ತೀರ್ಮಾನ ಕೈಗೊಳ್ಳಬೇಕು, ನಿರ್ಲಕ್ಷ್ಯ ಮಾಡಿದರೆ 26ರಂದು ಸುವರ್ಣಸೌಧಕ್ಕೆ ಮುತ್ತಿಗೆ ಆಗಬೇಕಾಗುತ್ತದೆ ಎಂದು ಕರ್ನಾಟಕ ರೈತ ಸಂಘಟನೆಗಳ ಒಕ್ಕೂಟ ಎಚ್ಚರಿಸಿದೆ.

ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ರೈತ ಸಂಘಟನೆಗಳ ಒಕ್ಕೂಟ ಹಾಗೂ ಮೈಸೂರಿನ ರಂಗಸಮುದ್ರ ಗ್ರಾಮ ಘಟಕ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ 27ನೇ ದಿನದ ಧರಣಿಯಲ್ಲಿ ರೈತರು ತಮ್ಮ ಆಕ್ರೋಶ ಹೊರಹಾಕಿದರು.

ಕಳೆದ ನಾಲ್ಕು ತಿಂಗಳಿಂದ ಕಬ್ಬು ನುರಿಸಿರುವ ಕಾರ್ಖಾನೆಗಳು. ರೈತರಿಗೆ ಕಬ್ಬಿನ ಹಣವನ್ನೇ ಪಾವತಿಸಿಲ್ಲ. ಕೆಲವು ಕಾರ್ಖಾನೆಗಳು ನೆಪ ಮಾತ್ರಕ್ಕೆ ಅಲ್ಪ ಸ್ವಲ್ಪ ಪಾವತಿಸಿದ್ದಾರೆ. ಎಫ್ಆರ್ಪಿ ನಿಯಮ ಪ್ರಕಾರ 14 ದಿಗಳಲ್ಲಿ ಪಾವತಿಸಬೇಕು. ಕಾರ್ಖಾನೆಗಳು ಉಲ್ಲಂಘನೆ ಮಾಡಿ, ಎರಡು ಸಾವಿರ ಕೋಟಿಗೂ ಹೆಚ್ಚು ಹಣ ಉಳಿಸಿಕೊಂಡಿವೆ.

ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.ಇದೇ 23ರಂದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟದ ವಿಶ್ವ ರೈತ ದಿನಾಚರಣೆಯಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿದ ಕಾಯಕಯೋಗಿಗಳಿಗೆ ಗೌರವ ಪುರಸ್ಕಾರ ಮಾಡಲು, ಸಂಯುಕ್ತ ಕಿಸಾನ್ ಮೋರ್ಚ ರಾಷ್ಟ್ರೀಯ ನಾಯಕ ಜಗಜಿತ್ ಸಿಂಗ್ ಧಲೆವಾಲ, ಪಂಜಾಬ್ ಆಗಮಿಸುತ್ತಿದ್ದಾರೆ. ಒಂದು ವರ್ಷ ದೆಹಲಿಯ ಗಡಿಯಲ್ಲಿ ಹೋರಾಟ ಮಾಡಿದ ಮುಖಂಡರ.

ನಮ್ಮ ಹತ್ರ ಅಣುಬಾಂಬ್ ಇದೆ : ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ಸಚಿವೆ

ನಾಳೆ ಮತ್ತ ನಾಡಿದ್ದು ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರು ಹಾಗೂ ಸಂಸದರ ನಿಯೋಗದೊಂದಿಗೆ, ಕೇಂದ್ರ ಕೃಷಿ ಸಚಿವ ಹಾಗೂ ಆಹಾರ ಸಚಿವರನ್ನು ಭೇಟಿ ಮಾಡಿ ಕಬ್ಬು ಬೆಳೆಗಾರರ ಜ್ವಲಂತ ಸಮಸ್ಯೆಗಳ ಪರಿಹಾರ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ರಾಜ್ಯಅಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಅವರು ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ 27ನೇ ದಿನದ ಧರಣಿ ನಿರತ ರೈತರ ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಹತ್ತಳ್ಳಿ ದೇವರಾಜï, ಬರಡನಪುರ ನಾಗರಾಜï, ಪರಶುರಾಮï, ಸುರೇಶ್, ರೇವಣ್ಣ, ಮೈಸೂರು ಜಿಲ್ಲೆಯ ರಂಗಸಮುದ್ರ, ಹಿಟ್ಟುವಳ್ಳಿ, ಗ್ರಾಮದ ನೂರಾರು ರೈತರು ಭಾಗವಹಿಸಿದ್ದರು.

#FormersProtest, #SuvarnaSoudha, #WinterSession,

Articles You Might Like

Share This Article