ಬೆಂಗಳೂರು,ನ.19- ನಗರದ ಹಲಸೂರು ಗೇಟ್ ಮತ್ತು ಮಡಿವಾಳ ಠಾಣೆ ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿ 8.20 ಲಕ್ಷ ರೂ. ಮೌಲ್ಯದ 19.510 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಹಲಸೂರು ಗೇಟ್ :
ಮಹಾರಾಷ್ಟ್ರದ ದೊಡ್ಲದಿಂದ ಮಾದಕವಸ್ತು ಗಾಂಜಾವನ್ನು ಕಡಿಮೆ ಬೆಲೆಗೆ ತಂದು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿ 4 ಲಕ್ಷ ರೂ. ಮೌಲ್ಯದ 12.200 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬನ್ನಪ್ಪ ರಸ್ತೆ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಇನ್‌್ಸಪೆಕ್ಟರ್ ಹನುಮಂತ, ಕೆ.ಭಜಂತ್ರಿ ಅವರಿಗೆ ಖಚಿತ ಮಾಹಿತಿ ಲಭಿಸಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿ, ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಪರಿಶೀಲಿಸಿ ಆತನ ಬಳಿಯಿದ್ದ 1,600 ರೂ. ಹಣ, ದ್ವಿಚಕ್ರ ವಾಹನ, ಬ್ಯಾಗ್ನಲ್ಲಿದ್ದ 12 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಡಿವಾಳ :
ಒಡಿಸ್ಸಾ ರಾಜ್ಯದಿಂದ ಗಾಂಜಾವನ್ನು ಕಡಿಮೆ ಬೆಲೆಗೆ ತಂದು ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿ 4.20 ಲಕ್ಷ ರೂ. ಮೌಲ್ಯದ 7 ಕೆಜಿ 310 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಮೂವರು ಆರೋಪಿಗಳು ಸಿಲ್ಕ್ ಬೋರ್ಡ್ ಫ್ಲೈಓವರ್ ಕೆಳಗೆ ವಾಹನಗಳನ್ನು ನಿಲ್ಲಿಸುವ ಸ್ಥಳದಲ್ಲಿ ಗಾಂಜಾವನ್ನು ಬ್ಯಾಗ್ನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು.
ಮಡಿವಾಳ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಾರ್ಯಾಚರಣೆ ಕೈಗೊಂಡು ಮೂವರನ್ನು ಬಂಧಿಸಿ 4.20 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಇನ್‌್ಸಪೆಕ್ಟರ್ ಮೊಹಮದ್ ಮತ್ತು ಸಿಬ್ಬಂದಿ ತಂಡ ಯಶಸ್ವಿಯಾಗಿದೆ.