ನಾಲ್ವರ ಬಂಧನ : 15.53ಲಕ್ಷ ಮೌಲ್ಯದ ಚಿನ್ನಾಭರಣ, ವಾಹನಗಳ ವಶ

Social Share

ಬೆಂಗಳೂರು, ನ.25- ಹಗಲು ಮತ್ತು ರಾತ್ರಿ ವೇಳೆ ಕನ್ನಗಳವು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಉತ್ತರ ವಿಭಾಗದ ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 15.53 ಲಕ್ಷ ರೂ. ಮೌಲ್ಯದ 261 ಗ್ರಾಂ ಚಿನ್ನಾಭರಣ 500 ಗ್ರಾಂ ಬೆಳ್ಳಿ ಸಾಮಾನುಗಳು, 7 ಸಾವಿರ ಹಣ ಹಾಗೂ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಕನ್ನಗಳ್ಳರ ಸೆರೆ:
ನಂದಿನಿ ಲೇಔಟ್ ರೈಲ್ವೆ ಮೈನ್ಸ್ ಕಾಲೋನಿಯಲ್ಲಿ ವಾಸವಿರುವ ಪಿರ್ಯಾದುದಾರರೊಬ್ಬರು ಅಕ್ಟೋಬರ್ 22ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಊರಿಗೆ ಹೋಗಿದ್ದಾಗ ಅವರ ಮನೆಯ ಬೀಗ ಮುರಿದು ಒಳನುಗ್ಗಿ ಹಣ, ಆಭರಣ ಕಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ 13.53 ಲಕ್ಷ ರೂ. ಮೌಲ್ಯದ 261 ಗ್ರಾಂ ತೂಕದ ಚಿನ್ನಾಭರಣ, 500 ಗ್ರಾಂ ಬೆಳ್ಳಿ ಸಾಮಾನುಗಳು, 7 ಸಾವಿರ ಹಣ, ಕೃತ್ಯಕ್ಕೆ ಬಳಸಿದ್ದ ಕೈ ಚೀಲ, ಕಬ್ಬಿಣದ ರಾಡು ಹಾಗೂ ಹ್ಯಾಂಡ್ ಗ್ಲೌಸ್ ವಶಪಡಿಸಿಕೊಳ್ಳುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಗಡಿ ವಿಷಯದಲ್ಲಿ ಪುಂಡಾಟಿಕೆ ಸಹಿಸಲ್ಲ : ಸಿಎಂ ಬೊಮ್ಮಾಯಿ ಎಚ್ಚರಿಕೆ

ಮೊದಲನೇ ಆರೋಪಿ ಈ ಹಿಂದೆ ಕೆಂಗೇರಿ, ಹಾಸನದ ಎಕ್ಸ್ಟೆನ್ಷನ್, ಚನ್ನರಾಯಪಟ್ಟಣ ಟೌನ್, ಬಿಂಡಿಗನವಿಲೆ, ಹೊಳೆನರಸೀಪುರ ಪೊಲೀಸ್ ಠಾಣೆಯ 17 ಹಗಲು ಮತ್ತು ರಾತ್ರಿ ಕನ್ನ ಕಳವು, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುತ್ತಾನೆ.

ಎರಡನೇ ಆರೋಪಿಯು ಮೊದಲನೇ ಆರೋಪಿಯೊಂದಿಗೆ ಸೇರಿಕೊಂಡು ಸುಮಾರು 9 ಕನ್ನಗಳವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುತ್ತಾನೆ.

ಮನೆಗೆ ಬೀಗ ಹಾಕಿ ಕೀಯನ್ನು ಕಿಟಕಿಯಲ್ಲಿ ಅಥವಾ ಹೂವಿನ ಕುಂಡಗಳಲ್ಲಿ ಇಟ್ಟು ಹೊರಗೆ ಹೋಗುವವರನ್ನು ಗಮನಿಸಿಕೊಂಡು ಆರೋಪಿಗಳು ಕಳವು ಮಾಡುತ್ತಿದ್ದರು. ಇನ್ನು ಕೆಲವು ಮನೆಗಳ ಡೋರ್ ಲಾಕ್ನ್ನು ಕಬ್ಬಿಣದ ರಾಡಿನಿಂದ ಮೀಟಿ ಕಳವು ಮಾಡುತ್ತಿದ್ದುದ್ದು ತನಿಖೆಯಿಂದ ತಿಳಿದುಬಂದಿರುತ್ತದೆ.

ಆರೋಪಿಗಳ ಬಂಧನದಿಂದ ನಂದಿನಿಲೇಔಟ್ ಠಾಣೆಯ 2 ಹಗಲು- ರಾತ್ರಿ ಕನ್ನಗಳವು ಪ್ರಕರಣಗಳು, ಮೂರು ಮನೆಗಳವು ಪ್ರಕರಣಗಳು ಸೇರಿದಂತೆ ಐದು ಪ್ರಕರಣಗಳು ಪತ್ತೆಯಾಗಿರುತ್ತವೆ.

ದ್ವಿಚಕ್ರ ವಾಹನ ಕಳವು: ಇಬ್ಬರ ಸೆರೆ
ಮನೆ ಮುಂದೆ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ ಎರಡು ಲಕ್ಷ ರೂ. ಬೆಲೆಬಾಳುವ ವಿವಿಧ ಕಂಪೆನಿಯ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಏಕನಾಥ್ ಶಿಂಧೆಗೆ ಕರ್ನಾಟಕ ಸಿಎಂ ವಿರುದ್ಧ ಮಾತನಾಡುವ ಧೈರ್ಯವಿಲ್ಲ: ಠಾಕ್ರೆ

ಲಕ್ಷ್ಮೀದೇವಿ ನಗರದ ನಿವಾಸಿಯೊಬ್ಬರು ತಮ್ಮ ಮನೆಯ ಮುಂದೆ ನ. 17ರಂದು ರಾತ್ರಿ 11.30ರ ಸಮಯದಲ್ಲಿ ತಮ್ಮ ಕೆಟಿಎಂ ಡ್ಯೂಕ್ ಬೈಕ್ನ್ನು ನಿಲ್ಲಿಸಿದ್ದು, ಮರುದಿನ ಬೆಳಗೆ ನೋಡಿದಾಗ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ಅವರು ನಂದಿನಿಲೇಔಟ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ನಾಲ್ಕು ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಓಲಾ,ಊಬರ್ ದರ ಶೇ.10 ರಷ್ಟು ಹೆಚ್ಚಳ ಸಾಧ್ಯತೆ..!?

ಈ ಇಬ್ಬರು ಆರೋಪಿಗಳು ಕೆಲವು ದಿನಗಳ ಹಿಂದೆ ಕೆಲಸ ಬಿಟ್ಟಿದ್ದು, ದೈನಂದಿನ ದುಶ್ಚಟಗಳ ಖರ್ಚಿನ ಹಣಕ್ಕಾಗಿ ಈ ಕೃತ್ಯವೆಸಗಿರುವುದು ವಿಚಾರಣೆಯಿಂದ ಗೊತ್ತಾಗಿದೆ. ಆರೋಪಿಗಳ ಬಂಧನದಿಂದ ನಂದಿನಿ ಲೇಔಟ್, ಮಾದನಾಯಕನಹಳ್ಳಿ ಠಾಣೆಯ ತಲಾ ಒಂದು ಪ್ರಕರಣ ಹಾಗೂ ನೆಲಮಂಗಲ ಟೌನ್ ಪೊಲೀಸ್ ಠಾಣೆಯ ಎರಡು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತದೆ.

ಮಲ್ಲೇಶ್ವರಂ ಉಪವಿಭಾಗದ ಎಸಿಪಿ ಪ್ರವೀಣ್ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ವೆಂಕಟೇಗೌಡ ಅವರ ನೇತೃತ್ವದ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Four, arrested, 15.53 lakh, gold, jewellery, vehicles,seized,

Articles You Might Like

Share This Article