ಆಟೋದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಾ ಮಾಡುತ್ತಿದ್ದ ಖದೀಮರು ಅಂದರ್

Social Share

ಬೆಂಗಳೂರು, ಫೆ.14- ಆಟೋದಲ್ಲಿ ಮಾದಕ ವಸ್ತು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ನಾಲ್ವರನ್ನು ಬಂಧಿಸಿ 43 ಕೆಜಿ ಗಾಂಜಾ, ಆಟೋರಿಕ್ಷಾ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ.
ಫೆ.10ರಂದು ಸಂಜೆ 6.30ರ ಸುಮಾರಿನಲ್ಲಿ ಉಪ್ಪಾರಪೇಟೆ ವ್ಯಾಪ್ತಿಯಲ್ಲಿ ಇಬ್ಬರು ಆಟೋರಿಕ್ಷಾದಲ್ಲಿ ಮಾದಕ ವಸ್ತು ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
ಇನ್ಸ್‍ಪೆಕ್ಟರ್ ಶಿವಸ್ವಾಮಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಸ್ಥಳಕ್ಕೆ ತೆರಳಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳಿಂದ 43 ಕೆಜಿ 380 ಗ್ರಾಂ ತೂಕದ ಮಾದಕ ವಸ್ತು ಗಾಂಜಾ, ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

Articles You Might Like

Share This Article