Thursday, October 30, 2025
Homeಬೆಂಗಳೂರುಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

Four arrested for selling IPL tickets

ಬೆಂಗಳೂರು,ಮೇ4-ಐಪಿಎಲ್ ಪಂದ್ಯಾವಳಿಯ ಆರ್‌ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ ನಡುವಿನ ಪಂದ್ಯದ ಟಿಕೆಟ್ ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿ ಒಂದು ಲಕ್ಷ ನಗದು, 32 ಟಿಕೆಟ್‌ಗಳು, 4 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಚರಣ್‌ ರಾಜ್, ವಿನಯ್, ವೆಂಕಟಸಾಯಿ ಕಿರಣ್ ಹಾಗೂ ಹರ್ಷವರ್ಧನ್ ಬಂಧಿತ ಆರೋಪಿಗಳು.
ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ದಾಳಿ ನಡೆಸಿದ ಪೊಲೀಸರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ ಒಬ್ಬನನ್ನು ಬಂಧಿಸಿ ಆತನಿಂದ 1200 ರೂ. ಬೆಲೆಯ 12 ಟಿಕೆಟ್ ಗಳು, ಒಂದು ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ವಿಚಾರಣೆ ವೇಳೆ ಈತನ ಇತರ ಮೂವರು ಸಹಚರರು ಕೂಡ ಇದರಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ತಕ್ಷಣ ಮಿಲ್ಲ‌ರ್ಸ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಬಳಿ ಈ ಮೂವರನ್ನು ವಶಕ್ಕೆ ಪಡೆದು, 1 ಲಕ್ಷನಗದು, 1200 ರೂ. ಮುಖಬೆಲೆಯ 20 ಟಿಕೆಟ್‌ಗಳು ಹಾಗೂ ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -
RELATED ARTICLES

Latest News