ವಿಜಯಪುರ,ಫೆ.14-ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದಲ್ಲಿ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮಣಿಕಂಠ ದನಕೊಪ್ಪ (27), ಹಾಗು ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು.
ಕಳೆದ ಅಕ್ಟೋಬರ್ 8ರಂದು ಬಾಗಪ್ಪನ ಶಿಷ್ಯನಿಂದ ಹತನಾಗಿದ್ದ ರವಿ ಅಗರಖೇಡ್‌ನ ತಮ್ಮ ಪಿಂಟ್ಯಾ ತನ್ನ ಸಹಚರರೊಂದಿಗೆ ಸೇರಿ ಸಂಚು ಮಾಡಿ ಫೆ. 11ರ ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಬಾಗಪ್ಪ ಹರಿಜನ್‌ನನ್ನು ನಡು ರಸ್ತೆಯಲ್ಲೇ ಭೀಕರವಾಗಿ ಕೊಲೆ ಮಾಡಿದ್ದ.
ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಹಟ್ಟಿ, ಡಿವೈಎಸ್ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ಆರೋಪಿಗಳನ್ನು ಬಂಧಿಸಲಾಗಿದೆ ಆಟೋದಲ್ಲಿ ಬಂದಿದ್ದ ಆರೋಪಿಗಳು ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಮತ್ತು ಗುಂಡು ಹಾರಿಸಿ ಸಂಬಂಧಿಕರ ಎದುರೇ ಹತ್ಯೆಗೈದಿದ್ದರು.