ಬಸ್‍ಗೆ ಗುದ್ದಿದ ಕಾರು, ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಥಾಣೆ, ಫೆ.1-ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಹಾರಿ ಬಸ್‍ಗೆ ಗುದ್ದಿದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈ-ನಾಸಿಕ್ ಹೆದ್ದಾರಿಯಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಭಾನುವಾರ ರಾತ್ರಿ ಸುಮಾರು 11.45ರ ಸಮಯದಲ್ಲಿ ಬಿನಾಂದಿ ವಲಯದ ಕೊಂಗಾಯನ್ ಪೊಲೀಸ್ ಠಾಣೆ ಸರಹದ್ದಿನ ಪಿಂಪಲಾಸ್ ಗ್ರಾಮದ ಬಳಿ ಅಪಘಾತ ನಡೆದಿದೆ.

ಮುಂಬೈಗೆ ವೇಗವಾಗಿ ಬರುತ್ತಿದ್ದ ಕಾರಿನ ಚಕ್ರ ಮುರಿದುಬಿದ್ದ ಕಾರಣ ಚಾಲಕ ನಿಲ್ಲಿಸಲುಹೋಗಿ ಅದು ವಿಭಜಕ್ಕೆ ಗುದ್ದಿದೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.