ಬೆಂಗಳೂರು, ಡಿ. 8- ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಸೇರಿದಂತೆ ನಾಲ್ಕು ಮಂದಿ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 22 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಕ್ರಿಸ್ಟೆಲ್, ಕೊಕೇನ್ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆದೀಶ್, ವಾಸೀಮ್, ಸೈಯದ್ ಹಾಗೂ ನೈಜಿರಿಯಾ ಪ್ರಜೆಯೊಬ್ಬನನ್ನು ಬಂಧಿಸಿ ಮಾರತ್‍ಹಳ್ಳಿ ಮತ್ತು ಹಾಗೂ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ನಗರದ ಮಾರತ್‍ಹಳ್ಳಿ, ಎಚ್‍ಎಸ್‍ಆರ್ ಬಡಾವಣೆ, ಕೋರಮಂಗಲ, ಇಂದಿರಾನಗರ ಮತ್ತು ಮೈಕೋಲೇಔಟ್ ವ್ಯಾಪ್ತಿಗಳಲ್ಲಿ ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ, ಐಟಿ, ಬಿಟಿ ಉದ್ಯೋಗಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.
ಗುಜರಾತ್ ಫಲಿತಾಂಶದಿಂದ ಹಿರಿಹಿರಿ ಹಿಗ್ಗಿದ ಸಿಎಂ ಬೊಮ್ಮಾಯಿ
ತಕ್ಷಣ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ, ಒಬ್ಬ ವಿದೇಶಿ ಪ್ರಜೆ ಸೇರಿದಂತೆ ನಾಲ್ವರನ್ನು ಬಂಧಿಸಿ 2 ಕೆಜಿ ಗಾಂಜಾ, 160 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 25 ಗ್ರಾಂ ಕೊಕೇನ್ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್, ಮೋಟರ್ ಸೈಕಲ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ನಗರದಲ್ಲಿರುವ ಸ್ಥಳೀಯ ಡ್ರಗ್ ಪೆಡ್ಲರ್‍ಗಳಿಂದ ಗಾಂಜಾ ಹಾಗೂ ನೈಜಿರಿಯಾ ಮೂಲದ ವ್ಯಕ್ತಿಯಿಂದ ಎಂಡಿಎಂಎ ಕ್ರಿಸ್ಟೇಲ್ ಅನ್ನು ಕಡಿಮೆ ಬೆಲೆಗೆ ಪಡೆದುಕೊಂಡು ಗಾಂಜಾವನ್ನು 100 ಗ್ರಾಂ ಗೆ 10 ಸಾವಿರದಂತೆ ಮಾರಾಟ ಮಾಡುತ್ತಿದ್ದರು.
ಎಂಡಿಎಂಎ ಕ್ರಿಸ್ಟೇಲ್‍ನ್ನು ಒಂದು ಗ್ರಾಂಗೆ ಆರು ಸಾವಿರದಂತೆ ಹಾಗೂ ಕೊಕೇನ್ ನನ್ನು ಒಂದು ಗ್ರಾಂಗೆ 12 ಸಾವಿರದಂತೆ ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ, ಐಟಿ, ಬಿಟಿ ಉದ್ಯೋಗಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
ಪಿಜಿಯಲ್ಲಿದ್ದ ಹುಡುಗಿಯರ ಅರೆನಗ್ನ ವಿಡಿಯೋ ಮಾಡುತ್ತಿದ್ದವನ ಬಂಧನ
ಈ ಕಾರ್ಯಾಚರಣೆಯನ್ನು ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಯಶಸ್ವಿಯಾಗಿ ಕೈಗೊಂಡಿದೆ.
Four, drug, peddlers, arrested,