ನಾಲ್ವರು ಡ್ರಗ್ ಪೆಡ್ಲರ್‌ಗಳ ಬಂಧನ

Social Share

ಬೆಂಗಳೂರು, ಅ.22- ಆ್ಯಪ್ ಮೂಲಕ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 4.5 ಲಕ್ಷ ರೂ. ಬೆಲೆಯ ಎಂಡಿಎಂಎ ಕ್ರಿಸ್ಟೆಲ್, ಗಾಂಜಾ, 5 ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿತಿನ್, ರೇಹನ್, ಯಶವಂತ್ ಮತ್ತು ಸೆಲ್ವಿನ್ ಬಂಧಿತ ಡ್ರಗ್ ಪೆಡ್ಲರ್‍ಗಳು. ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದಾಗ ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ನಾಲ್ವರನ್ನು ಬಂಧಿಸಿದೆ.

ಕೇರಳ ಮೂಲದ ವ್ಯಕ್ತಿಯನ್ನು ವಿಕ್ಕರ್-ಮಿ ಎಂಬ ಆ್ಯಪ್‍ನಲ್ಲಿ ಆರೋಪಿಗಳು ಸಂಪರ್ಕಿಸಿ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿಸಿ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ-ಬಿಟಿ ಉದ್ಯೋಗಿಗಳಿಗೆ ಹಾಗೂ ತಮಗೆ ಪರಿಚಯವಿರುವ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತÉೂಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

ಬೆಂಗಳೂರು : ಮನೆಯ ಟೆರೆಸ್‍ನಲ್ಲಿ ವ್ಯಕ್ತಿಯ ಭೀಕರ ಹತ್ಯೆ

ಆರೋಪಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಆರೋಪಿ ತಲೆಮರೆಸಿಕೊಂಡಿದ್ದು, ಶೋಧಕಾರ್ಯ ಮುಂದುವರೆದಿದೆ. ಬಂಧಿತರಿಂದ 4.5 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ 60 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 2 ಕೆಜಿ ಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಮೊಬೈಲ್ ಫೋನ್‍ಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಏಷ್ಯಾ ಕಪ್ ಪಂದ್ಯದ ಭವಿಷ್ಯ ಬಿಸಿಸಿಐ ನಿರ್ಧರಿಸಲಿದೆ ; ರೋಹಿತ್

ಆರೋಪಿಗಳು ಮಾದಕ ವಸ್ತುಗಳ ಮಾರಾಟ-ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Articles You Might Like

Share This Article