Wednesday, September 3, 2025
Homeರಾಜ್ಯನಾಲ್ವರು ಅಂತಾರಾಜ್ಯ ಆರೋಪಿಗಳ ಸೆರೆ : 10.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

ನಾಲ್ವರು ಅಂತಾರಾಜ್ಯ ಆರೋಪಿಗಳ ಸೆರೆ : 10.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

Four interstate accused arrested: Ganja worth Rs 10.60 lakh seized

ಬೆಂಗಳೂರು,ಸೆ.3-ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿರುವ ನಗರ ಪೊಲೀಸರು ಒಟ್ಟು 10.60 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ವಿವೇಕನಗರ:
ಎರಡು ಪ್ರಕರಣಗಳಲ್ಲಿ ಒರಿಸ್ಸಾ ಹಾಗೂ ಬಿಹಾರ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ವಿವೇಕನಗರ ಠಾಣೆ ಪೊಲೀಸರು 5.60 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ವನ್ನಾರಪೇಟೆ ಕಡೆಗೆ ಹೋಗುವ ರಸ್ತೆಯ ಎಎಸ್‌‍ಸಿ ಸೆಂಟರ್‌ ಕಾಂಪೌಂಡ್‌ ಪಕ್ಕದ ಫುಟ್‌ಪಾತ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.

ಖಚಿತ ಮಾಹಿತಿಯನ್ನಾಧರಿಸಿ ಎನ್‌ಡಿಪಿಎಸ್‌‍ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನಂತರ ಸ್ಥಳದ ಮೇಲೆ ಪೊಲೀಸರು ದಾಳಿ ಮಾಡಿ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತ ಒರಿಸ್ಸಾ ರಾಜ್ಯದವನು ಎಂಬುವುದು ಗೊತ್ತಾಗಿದೆ. ನಗರದಲ್ಲಿ ತಾನು ವಾಸವಾಗಿದ್ದುಕೊಂಡು ಅಪರಿಚಿತ ವ್ಯಕ್ತಿಯೊಬ್ಬನಿಂದ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿಕೊಂಡು ಬಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ 11 ಕೆಜಿ 150 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬಿಹಾರ ರಾಜ್ಯದ ಆರೋಪಿಯನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿ 60 ಸಾವಿರ ಬೆಲೆಯ 2 ಕೆಜಿ 270 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ನೀಲಸಂದ್ರದ ಪಾರ್ಕ್‌ವೊಂದರ ಬಳಿ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಆಧರಿಸಿ, ಸ್ಥಳದ ಮೇಲೆ ದಾಳಿ ಮಾಡಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಿಹಾರ ಮೂಲದವನೆಂಬುವುದು ಗೊತ್ತಾಗಿದೆ.

ಈ ಆರೋಪಿಯು ಅಪರಿಚಿತ ವ್ಯಕ್ತಿಯಿಂದ ಮಾದಕ ವಸ್ತು ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು ರೈಲಿನಲ್ಲಿ ನಗರಕ್ಕೆ ಸಾಗಾಣಿಕೆ ಮಾಡಿಕೊಂಡು ಬಂದು ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದುದ್ದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಎರಡು ಪ್ರಕರಣಗಳನ್ನು ಭೇದಿಸುವಲ್ಲಿ ಇನ್‌್ಸಪೆಕ್ಟರ್‌ ಶಿವಕುಮಾರ್‌ ಹಾಗೂ ಸಿಬ್ಬಂದಿ ತಂಡ ಯಶಸ್ವಿಯಾಗಿದೆ.

ಜಾಲಹಳ್ಳಿ:
ಒರಿಸ್ಸಾ ರಾಜ್ಯದ ಇಬ್ಬರು ಆರೋಪಿಗಳನ್ನು ಜಾಲಹಳ್ಳಿ ಠಾಣೆ ಪೊಲೀಸರು ಬಂಧಿಸಿ 4 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.ಹೆಚ್‌ಎಂಟಿ ಫ್ಯಾಕ್ಟರಿ ರಸ್ತೆಯ ಕಾಳಿಂಗರಾವ್‌ ಸರ್ಕಲ್‌ ಬಳಿ ಇಬ್ಬರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಒರಿಸ್ಸಾದ ಪುಟ್ಟಂಗಿಯಲ್ಲಿರುವ ಅಪರಿಚಿತ ವ್ಯಕ್ತಿಗಳಿಂದ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿಕೊಂಡು ಬಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದ್ದಾಗಿ ಹೇಳಿದ್ದಾರೆ. ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ 4 ಕೆಜಿ 100 ಗ್ರಾಂ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಇನ್‌್ಸಪೆಕ್ಟರ್‌ ಸಿದ್ದೇಗೌಡ ಹಾಗೂ ಸಿಬ್ಬಂದಿ ತಂಡ ಯಶಸ್ವಿಯಾಗಿದೆ.

RELATED ARTICLES

Latest News