ಟ್ರ್ಯಾಕ್ಟರ್ ಟ್ರಾಲಿಗೆ ಕಾರು ಡಿಕ್ಕಿ, ನಾಲ್ವರ ದುರ್ಮರಣ, 13 ಮಂದಿ ಸ್ಥಿತಿ ಗಂಭೀರ

Social Share

ಲಖ್ನೋ,ಆ.23-ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 13 ಜನರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಕಾರಿನಲ್ಲಿದ್ದ ಶಿವಾನಿ(18)ಮತ್ತು ಚಾಲಕ ಸಾರ್ಥಕ್ ಭಾರದ್ವಾಜ್(25) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಟ್ರಾಕ್ಟರ್‍ನ ಟ್ರಾಲಿಯೊಳಗೆ ಸಿಲುಕಿದ್ದ ಪ್ರಯಾಣಿಕರಾದ ಸಾವಿತ್ರಿ ದೇವಿ(50) ಮತ್ತು ಜ್ಞಾನವತಿ( 47) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾವನ್ನಪ್ಪಿದ್ದಾರೆ.

ರಾಜಧಾನಿ ಲಕ್ನೋದಿಂದ ಸುಮಾರು 700 ಕಿಮೀ ದೂರದಲ್ಲಿರುವ ಸಹರಾನ್‍ಪುರ ಜಿಲ್ಲೆಯ ದಿಯೋಬಂದ್ ಪ್ರದೇಶದಲ್ಲಿರುವ ರೋಹನಾ ಟೋಲ್ ಪ್ಲಾಜಾ ಬಳಿಯ ಮುಜಾಫರ್‍ನಗರ-ಸಹಾರನ್‍ಪುರ ಹೆದ್ದಾರಿಯಲ್ಲಿ ತಡರಾತ್ರಿ ಈ ಅಪಘಾತ ಸಂಭವಿಸಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ದೀಪಕ್‍ಕುಮಾರ್ ನೇತೃತ್ವದಲ್ಲಿ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡಿರುವ 18 ಜನರ ಪೈಕಿ 13 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಕರನ್ ತಿಳಿಸಿದ್ದಾರೆ.

ಕಾರು ಅತಿವೇಗವಾಗಿ ಚಾಲಿಸುತ್ತಿದ್ದರಿಂದ ಈ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಅವರು ತಿಳಿಸಿದ್ದಾರೆ. ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಉತ್ತರಪ್ರದೇಶ ಸರ್ಕಾರ ಹೊರಡಿಸಿದ ಹೇಳಿಕೆ ತಿಳಿಸಲಾಗಿದೆ.

Articles You Might Like

Share This Article