Monday, February 26, 2024
Homeರಾಜ್ಯಬೆಳ್ಳಂಬೆಳಗ್ಗೆ ಭೀಕರ ಅಪಘಾತ, ರಸ್ತೆ ಬದಿ ನಿಂತಿದ್ದ ನಾಲ್ವರ ಮೇಲೆ ಹರಿದ ಲಾರಿ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ರಸ್ತೆ ಬದಿ ನಿಂತಿದ್ದ ನಾಲ್ವರ ಮೇಲೆ ಹರಿದ ಲಾರಿ

ಹುಬ್ಬಳ್ಳಿ,ಜ.6- ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಮುಂಜಾನೆ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದಾಗ ಲಾರಿಯೊಂದು ವೇಗವಾಗಿ ಬಂದು ಮತ್ತೆ ಡಿಕ್ಕಿ ಹೊಡೆದ ಪರಿಣಾಮ ಹಾಸನದ ಮೂಲದ ಮೂವರು ಯುವಕರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಹಾಸನ ಜಿಲ್ಲೆಯ ಅರಕಲಗೂಡಿನ ಮಣಿಕಂಠ (26), ಪವನ್(23), ಚಂದನ್(31) ಮತ್ತು ಬೆಂಗಳೂರಿನ ಹರೀಶ್ (34) ಸಾವನ್ನಪ್ಪಿರುವ ದುರ್ದೈವಿಗಳು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರುಗಳ ನಡುವೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಮುಂಜಾನೆ 4.30ರ ಸುಮಾರಿನಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಎರಡು ಕಾರುಗಳಲ್ಲಿದ್ದ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಅವರನ್ನು ಆ್ಯಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ

ಇನ್ನುಳಿದ ನಾಲ್ವರು ರಸ್ತೆ ಪಕ್ಕದಲ್ಲಿ ನಿಂತುಕೊಂಡು ಮಾತನಾಡುತ್ತಿದ್ದಾಗ ಅದೇ ಸಂದರ್ಭದಲ್ಲಿ ಹಾವೇರಿ ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಕುಂದಗೋಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ. ಮುಂಜಾನೆ ಮಂಜು ಆವರಿಸಿದ್ದ ಕಾರಣ ಈ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಸಚಿವರ ಭೇಟಿ: ಕಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ನಾಲ್ವರ ಮೃತದೇಹಗಳನ್ನು ಕಂಡು ಭಾವುಕರಾದರು. ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿರೀಕ್ಷಿತವಾಗಿ ಈ ಅಪಘಾತ ಸಂಭವಿಸಿದೆ. ಕಾರು ಅಪಘಾತದ ನಂತರ ರಸ್ತೆ ಬದಿ ನಿಂತವರವುಗಳ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಯಾವ ರೀತಿ ಅಪಘಾತ ಸಂಭವಿಸಿದೆ ಎಂಬುದರ ಬಗ್ಗೆ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಘಟನೆ ದುರಾದೃಷ್ಟಕರ ಎಂದರು.

RELATED ARTICLES

Latest News