Friday, November 22, 2024
Homeರಾಷ್ಟ್ರೀಯ | Nationalಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರ ಎನ್‍ಕೌಂಟರ್, ನಾಲ್ವರು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರ ಎನ್‍ಕೌಂಟರ್, ನಾಲ್ವರು ನಕ್ಸಲರ ಹತ್ಯೆ

ಗಡ್ಚಿರೋಲಿ, ಮಾ.19 – ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್‍ಕೌಂಟರ್ ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯ ನಡುವೆ ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಕೆಲವು ನಕ್ಸಲೀಯರು ನೆರೆಯ ತೆಲಂಗಾಣದಿಂದ ಪ್ರಾಣಹಿತ ನದಿ ದಾಟಿ ಗಡ್ಚಿರೋಲಿಗೆ ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಅನ್ವಯ ಪೊಲೀಸರಿಗೆ ಸಿಕ್ಕ ಮಾಹಿತಿ ಅನ್ವಯಕಾರ್ಯಾಚರಣೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ತಿಳಿಸಿದ್ದಾರೆ.

ಮೃತ ನಕ್ಸಲರ ಪತ್ತೆಗೆ ಬಹುಮಾನವನ್ನು ಘೋಷಿಸಲಾಗಿತ್ತು ಗಡ್ಚಿರೋಲಿ ಪೊಲೀಸರ ವಿಶೇಷ ತಂಡಗಳು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಕ್ವಿಕ್ ಆಕ್ಷನ್ ತಂಡವನ್ನು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು.

ಬೆಳಗ್ಗೆ ರೆಪನ್‍ಪಲ್ಲಿ ಸಮೀಪದ ಕೋಲಮಾರ್ಕ ಪರ್ವತಗಳಲ್ಲಿ ಶೋಧ ನಡೆಸುತ್ತಿದ್ದಾಗ ನಕ್ಸಲೀಯರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಂಡಿನ ದಾಳಿ ನಿಂತ ನಂತರ, ಆ ಪ್ರದೇಶದಲ್ಲಿ ಶೋಧ ನಡೆಸಲಾಯಿತು ನಾಲ್ವರು ನಾಲ್ವರು ಪುರುಷ ನಕ್ಸಲೀಯರ ಮೃತದೇಹಗಳು ಪತ್ತೆಯಾಗಿವೆ, ಅವರ ತಲೆಯ ಮೇಲೆ 36 ಲಕ್ಷ ರೂಪಾಯಿಗಳ ಸಾಮೂಹಿಕ ನಗದು ಬಹುಮಾನವನ್ನು ಹೊತ್ತಿದ್ದಾರೆ ಎಂದು ಅವರು ಹೇಳಿದರು.

RELATED ARTICLES

Latest News