Wednesday, January 15, 2025
Homeಇದೀಗ ಬಂದ ಸುದ್ದಿಛತ್ತೀಸಗಢದಲ್ಲಿ ಮತ್ತೆ ನಾಲ್ವರು ನಕ್ಸಲೀಯರ ಎನ್‌ಕೌಂಟರ್‌

ಛತ್ತೀಸಗಢದಲ್ಲಿ ಮತ್ತೆ ನಾಲ್ವರು ನಕ್ಸಲೀಯರ ಎನ್‌ಕೌಂಟರ್‌

ರಾಯ್ಪುರ, ಏ.2 (ಪಿಟಿಐ) : -ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಕಾಳಗ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಸ್ಥಳದಿಂದ ನಾಲ್ವರು ನಕ್ಸಲೀಯರ ದೇಹ ಮತ್ತು ಶಸಾಸವನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಈ ಘಟನೆಯೊಂದಿಗೆ, ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಈ ವರ್ಷ ಇದುವರೆಗೆ 34 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದು, ಏಪ್ರಿಲ್ 19ರಂದು ಮೊದಲ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದೆ.

RELATED ARTICLES

Latest News