Wednesday, February 12, 2025
Homeರಾಜ್ಯಭೀಕರ ಅಪಘಾತ : ಮೂವರು ಮಕ್ಕಳು ಸೇರಿ ನಾಲ್ವರ ಸಾವು

ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ನಾಲ್ವರ ಸಾವು

ಚಿತ್ರದುರ್ಗ, ಜ.25- ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಸೇತುವೆಗೆ ಕಾರು ಡಿಕ್ಕಿಯಾದ ಪರಿಣಾಮ ಮೂರು ಕಂದಮ್ಮಗಳು ಸೇರಿ ನಾಲ್ವರು ಮೃತಪಟ್ಟಿರುವ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನ ಹಳ್ಳಿಯ ನಿವಾಸಿಗಳಾದ ಲಿಂಗಪ್ಪ(25) ಮತ್ತು ಎರಡು ವರ್ಷದ ಸಿಂಧೂಶ್ರೀ, ಐದು ತಿಂಗಳ ಕೂಸು ಅಯ್ಯಾಳಪ್ಪ, ಮೂರು ತಿಂಗಳ ಮತ್ತೊಂದು ಕೂಸು ರಕ್ಷಾ ಮೃತಪಟ್ಟ ದುರ್ದೈವಿಗಳು.

ಅಪಘಾತದಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಕಂದಮ್ಮಗಳೂ ಸೇರಿದಂತೆ ಎಂಟು ಮಂದಿ ದೇವದುರ್ಗದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟಿನ ಸಮೀಪ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಲಿಂಗಪ್ಪ ಹಾಗೂ ಮೂವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಿಂಡೆನ್‍ಬರ್ಗ್ ಆರೋಪದಿಂದ ಅಮೂಲ್ಯ ಪಾಠ ಕಲಿತಿದ್ದೇವೆ ; ಅದಾನಿ

ದಾರಿ ಹೋಕರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ಕೊಡಿಸಲು ನೆರವಾದರು. ಸುದ್ದಿತಿಳಿಯುತ್ತಿದ್ದಂತೆ ಚಳ್ಳಕೆರೆ ಡಿವೈಎಸ್‍ಪಿ ರಾಜಣ್ಣ, ಇನ್ಸ್‍ಪೆಕ್ಟರ್ ದೇಸಾಯಿ, ಪಿಎಸ್‍ಐ ಶಿವರಾಜು, ಎಎಸ್‍ಐ ನಾಗೇಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News