ಹುಬ್ಬಳ್ಳಿ,ಜು.8- ದಿನದಿಂದ ದಿನಕ್ಕೆ ಮಾರಕ ರೋಗ ಡೆಂಘೀ ಉಲ್ಬಣಗೊಳ್ಳುತ್ತಿದ್ದು, ರಾಜ್ಯಾದ್ಯಂತ ಸಾವಿರಾರು ಜನ ಡೆಂಘೀ ಲಕ್ಷಣಗಳಿಂದ ನಲುಗುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಡೆಂಘೀ ಕಾಯಿಲೆಯಿಂದ ನಾಲ್ವರು ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಎಸ್.ಕಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಕ್ಕಳ ವಾರ್ಡ್‌ನಲ್ಲಿ ಡೆಂಘೀಯಿಂದ ನಾಲ್ವರು ಮೃತಪಟ್ಟಿದ್ದಾರೆ. ಕಿಮ್ಸ್ ಆಸ್ಪತ್ರೆಯ ಮೆಡಿಸನ್ ವಾರ್ಡ್‌ನಲ್ಲಿ ಯಾವುದೇ ಸಾವು ಆಗಿಲ್ಲ ಎಂದು ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಡೆಂಘೀಯಿಂದ ಯಾವುದೇ ಸಾವು ಸಂಭವಿಸಿಲ್ಲ. ಬೇರೆ ಜಿಲ್ಲೆಗಳಿಂದ ಬಂದಿರುವ ನಾಲ್ವರು ರೋಗಿಗಳ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
ಸದ್ಯ ಮೆಡಿಸನ್ ವಾರ್ಡ್‌ನ ಐಸಿಯುವಿನಲ್ಲಿ ಇಬ್ಬರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಮಕ್ಕಳ ವಾರ್ಡ್‌ನ ಐಸಿಯುವಿನಲ್ಲಿ 18 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರು ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.