Friday, May 3, 2024
Homeರಾಷ್ಟ್ರೀಯಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮುಖ್ಯ ಅತಿಥಿ..?

ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮುಖ್ಯ ಅತಿಥಿ..?

ನವದೆಹಲಿ, ಡಿ 22 (ಪಿಟಿಐ) ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೊದಲು ಅಮೆರಿಕ ಅಧ್ಯಕ್ಷ ಜೋ ಬಿಡೇನ್ ಅವರನ್ನು ಗಣ ರಾಜ್ಯೋತ್ಸವದ ಮುಖ್ಯ ಅತಿಥಿಯಾಗುವಂತೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಜನವರಿಯಲ್ಲಿ ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ನಂತರ ಫ್ರಾನ್ಸ್ ಅಧ್ಯಕ್ಷರಿಗೆ ಮನವಿ ಮಾಡಿಕೊಳ್ಳಲಾಗಿತ್ತು.

ಜಾರ್ಖಂಡ್‍ : ರೈಲ್ವೆ ಹಳಿ ಸ್ಪೋಟಿಸಿದ ನಕ್ಸಲರು

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅವರೇ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

Latest News