Wednesday, April 15, 2026
Homeರಾಷ್ಟ್ರೀಯಸೇನಾ ವಾಹನ ಕಮರಿಗೆ ಉರುಳಿ ಹತ್ತು ಯೋಧರು ಸಾವು

ಸೇನಾ ವಾಹನ ಕಮರಿಗೆ ಉರುಳಿ ಹತ್ತು ಯೋಧರು ಸಾವು

ಜಮ್ಮು, ಜ.22- ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಹತ್ತು ಯೋಧರು ಸಾವನ್ನಪ್ಪಿದ್ದಾರೆ. ಭಾದೇವಾರ್‌-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಮೇಲ್ಭಾಗದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಗುಂಡು ನಿರೋಧಕ ಸೇನಾ ವಾಹನವು ಎತ್ತರದ ಪೋಸ್ಟ್‌ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ ಮತ್ತು ಪೊಲೀಸರ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು ಮತ್ತು ಹತ್ತು ಸೈನಿಕರು ಮೃತಪಟ್ಟಿದ್ದಾರೆ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಸ್ಥಿತಿಯಲ್ಲಿ ಇತರ ಒಂಬತ್ತು ಸೈನಿಕರನ್ನು ರಕ್ಷಿಸಲಾಗಿದೆ ಮತ್ತು ಅವರಲ್ಲಿ ಗಂಭೀರ ಗಾಯಗೊಂಡ ಮೂವರನ್ನು ವಿಶೇಷ ಚಿಕಿತ್ಸೆಗಾಗಿ ಉಧಂಪುರ ಮಿಲಿಟರಿ ಆಸ್ಪತ್ರೆಗೆ ವಿಮಾನದ ಮೂಲಕ ಸಾಗಿಸಲಾಗಿದೆ ಎಂದು ಅವರು ಹೇಳಿದರು

RELATED ARTICLES

Latest News