Homeರಾಷ್ಟ್ರೀಯಪ್ರಧಾನಿ ಮೋದಿ ಹೆಸರಲ್ಲಿ ಸೇವಾ ಸಂಕಲ್ಪ ಕಾರ್ಯಕ್ರಮಕ್ಕೆ ಬಿಜೆಪಿ ಸಿದ್ಧತೆ

ಪ್ರಧಾನಿ ಮೋದಿ ಹೆಸರಲ್ಲಿ ಸೇವಾ ಸಂಕಲ್ಪ ಕಾರ್ಯಕ್ರಮಕ್ಕೆ ಬಿಜೆಪಿ ಸಿದ್ಧತೆ

ನವದೆಹಲಿ, ಸೆ.2- ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶಾದ್ಯಂತ ಸೇವಾ ಸಂಕಲ್ಪ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಅಭಿಯಾನದ ರೂಪುರೇಷೆ ಹಾಗೂ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಇಂದು ನವದೆಹಲಿಯಲ್ಲಿ ಬಿಜೆಪಿ ಪ್ರಮುಖರ ಮಹತ್ವದ ಸಭೆ ನಡೆಯಲಿದೆ.

ಬಿಜೆಪಿ ಹಾಗೂ ಎನ್‌ಡಿಎ ಆಡಳಿತದ ರಾಜ್ಯಗಳ ಆಯ್ದ ಮುಖ್ಯ ಮಂತ್ರಿಗಳು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬೀನ್‌ ಅವರ ನಿವಾಸದಲ್ಲಿ ನಡೆಯಲಿರುವ ತರಬೇತಿ ಕಾರ್ಯಾಗಾರದಲ್ಲಿ ದೇಶಾದ್ಯಂತ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸುಮಾರು 25 ಮುಖ್ಯಮಂತ್ರಿಗಳು ಹಾಗೂ ಸಚಿವರು ಭಾಗವಹಿಸುವ ನಿರೀಕ್ಷೆಯಿದೆ. ್ಲಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ಸಾಧನೆಗಳು ಹಾಗೂ ವಿವಿಧ ಜನಪರ ಯೋಜನೆಗಳನ್ನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರದಲ್ಲಿ ತಂತ್ರಗಾರಿಕೆ ರೂಪಿಸಲಾಗುತ್ತದೆ.

ಅಭಿಯಾನವನ್ನ ಪರಿಣಾಮ ಕಾರಿಯಾಗಿ ದೇಶಾದ್ಯಂತ ನಡೆಸುವ ಕುರಿತು ನಾಯಕರು ಚರ್ಚೆ ನಡೆಸಲಿದ್ದಾರೆ.ಇನ್ನೂ ಕಾರ್ಯಾಗಾರ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿ ನಾಯಕರು ಭೇಟಿಯಾಗುವ ಸಾಧ್ಯತೆಯೂ ಇದೆ. ಮೋದಿ ಅವರ ಸಾರ್ವಜನಿಕ ಜೀವನದ 25ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಮುಂದಿನ 1 ತಿಂಗಳ ಅವಧಿಯಲ್ಲಿ ಒಟ್ಟು 17 ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಸೇವೆ, ಅಭಿವೃದ್ಧಿ ಹಾಗೂ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವುದೇ ಈ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ.

RELATED ARTICLES
spot_img

Latest News