Saturday, April 11, 2026
Homeರಾಜ್ಯದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸಲಿದೆ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸಲಿದೆ

Davangere South constituency by-election will change the direction of state politics

ದಾವಣಗೆರೆ,ಮಾ.29- ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌‍ ದಾಸಕರಿಯಪ್ಪ ಅವರನ್ನು ಗೆಲ್ಲಿಸಲಿದ್ದಾರೆ. ಇಷ್ಟು ವರ್ಷಗಳ ಕಾಲ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಗೆಲುವು ಸಾಧಿಸಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಇದರಿಂದ ಮತದಾರರು ಬೇಸತ್ತಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ರಾಜ್ಯದ ರಾಜಕಾರಣದ ದಿಕ್ಕನ್ನು ಬದಲಿಸುವ ಒಂದು ಪ್ರಮುಖ ಶಕ್ತಿಯಾಗಲಿವೆ ಎಂಬುದನ್ನು ಸಾರ್ವಜನಿಕರೇ ಮಾತನಾಡುತ್ತಿದ್ದಾರೆ ಎಂದರು.

ಸುದೀರ್ಘ ಕಾಲ ಈ ಕ್ಷೇತ್ರ ಕಾಂಗ್ರೆಸ್‌‍ನ ಹಿಡಿತದಲ್ಲಿದ್ದರೂ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ. ದಾಸ ಕರಿಯಪ್ಪ ಅವರನ್ನು ಗೆಲ್ಲಿಸಿದರೆ ಬಡವರಿಗೆ, ಹಿಂದುಳಿದ ವರ್ಗಗಳಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಸೇರಿ ಎಲ್ಲ ಸಮುದಾಯಗಳಿಗೂ ನ್ಯಾಯ ಸಿಗಲಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಲ್ಪಸಂಖ್ಯಾತರಿಗೆ ಏನೂ ಮಾಡಲಿಲ್ಲ. ಕಾಂಗ್ರೆಸ್‌‍ ಪಕ್ಷ ತಮನ್ನು ಮತ ಬ್ಯಾಂಕ್‌ ಆಗಿ ದುರ್ಬಳಕೆ ಮಾಡಿಕೊಂಡಿದೆ ಎಂದು ಅಲ್ಪಸಂಖ್ಯಾತರೇ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆಯಲ್ಲಿ ದಾಖಲೆ ಮಾಡಿದರೂ ರಾಜ್ಯಕ್ಕಾಗಲಿ, ದಾವಣಗೆರೆ ದಕ್ಷಿಣಕ್ಕಾಗಲಿ ಅನುಕೂಲವಾಗಿಲ್ಲ ಎಂದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮಾಯಿ, ವಿಧಾನಸಭೆ ವಿರೋಧಪಕ್ಷದ ನಾಯಕರಾದ ಆರ್‌. ಅಶೋಕ್‌, ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಇಂದಿನಿಂದ ಪ್ರಚಾರಕ್ಕಾಗಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್ವರ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಶಿವಯೋಗಿಸ್ವಾಮಿ ಶಾಸಕರಾದ ಬಿ.ಪಿ.ಹರೀಶ್‌, ಜಿಲ್ಲಾಧ್ಯಕ್ಷ ಎನ್‌.ರಾಜಶೇಖರ್‌, ಮಾಜಿ ಸಚಿವರಾದ ಶಿವನಗೌಡ ನಾಯಕ್‌, ಮಾಜಿ ಶಾಸಕರಾದ ರಾಮಚಂದ್ರಪ್ಪ, ಗಾಯತ್ರಿ ಸಿದ್ದೇಶ್ವರ್‌, ರಾಜ್ಯ ವಕ್ತಾರ ನರೇಂದ್ರ ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News