Homeರಾಜ್ಯನಾಯಕತ್ವದ ಬದಲಾವಣೆ : ಡಿಕೆಶಿಗೆ ಹೈಕಮೆಂಡ್ ತಾಳ್ಮೆಯ ಕಟ್ಟಪ್ಪಣೆ

ನಾಯಕತ್ವದ ಬದಲಾವಣೆ : ಡಿಕೆಶಿಗೆ ಹೈಕಮೆಂಡ್ ತಾಳ್ಮೆಯ ಕಟ್ಟಪ್ಪಣೆ

ಬೆಂಗಳೂರು, ಫೆ.14- ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ನಾಯಕತ್ವದ ಬದಲಾವಣೆ ಕುರಿತಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅನಗತ್ಯವಾಗಿ ಈ ವಿಷಯವಾಗಿ ಗೊಂದಲಗಳನ್ನು ಸೃಷ್ಟಿಸಬಾರದು ಎಂದು ಹೈಕಮಾಂಡ್‌ ನಾಯಕರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಗೆ ಕಟ್ಟಪ್ಪಣೆ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರು, ಫೆಬ್ರವರಿ 11ರಿಂದ ಮೂರು ದಿನಗಳ ಕಾಲ ದೆಹಲಿಯಲ್ಲೇ ಬೀಡು ಬಿಟ್ಟಿದ್ದರು. ಆ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಪಕ್ಷದ ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚಿಸಿರುವ ಡಿ.ಕೆ.ಶಿವಕುಮಾರ್‌ ಹೈಕಮಾಂಡ್‌ ಮತ್ತು ಸಿದ್ದರಾಮಯ್ಯ ಅವರು 2023ರ ಮೇ ನಲ್ಲಿ ನನಗೆ ನೀಡಿದ್ದ ಭರವಸೆಯಂತೆ ನಡೆದುಕೊಳ್ಳಬೇಕು ಎಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಆದರೆ ಸದ್ಯಕ್ಕೆ ಈ ವಿಚಾರವಾಗಿ ಚರ್ಚೆ ಬೇಡ, ಮೇ ತಿಂಗಳ ನಂತರ ಈ ಬಗ್ಗೆ ಚರ್ಚೆ ಮಾಡೋಣ ಎಂದು ಪಕ್ಷದ ಪ್ರಮುಖ ನಾಯಕರು ಮತ್ತೊಮೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಎಲ್ಲರನ್ನೂ ಭೇಟಿ ಮಾಡಿದ್ದೇನೆ. ಪ್ರಯತ್ನ ಫಲ ನೀಡಲಿದೆ. ಆ ವರೆಗೂ ತಾಳ್ಮೆ ಇರಬೇಕು ಎಂದು ಖುದ್ದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡಿದ್ದಾರೆ. ಇನ್ನೂ ಮೂರ್ನಾಲ್ಕು ತಿಂಗಳು ನಾಯಕತ್ವ ಬದಲಾವಣೆಯ ತಂಟೆಗೆ ಹೋಗದಿರಲು ಹೈಕಮಾಂಡ್‌ ಕೆಲ ಪ್ರಮುಖ ಕಾರಣಗಳನ್ನು ನೀಡಿದೆ. ಸದ್ಯಕ್ಕೆ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಎಲ್ಲ ನಾಯಕರು ಆ ಪ್ರಕ್ರಿಯೆಗಳ ಕಾರ್ಯದೊತ್ತಡದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕಾದರೆ, ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರನ್ನು ಕರೆದು ಚರ್ಚೆ ಮಾಡಿ ವಿಶ್ವಾಸಕ್ಕೆ ತೆಗೆದುಕೊಂಡು ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಅದಕ್ಕಾಗಿ ತಾಳೆಯಿಂದ ಇರಿ ಎಂದು ತಿಳಿ ಹೇಳಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರು 17ನೇ ಬಜೆಟ್‌ ಮಂಡಿಸುವ ಮೂಲಕ ತಾವು ಹೊಸ ದಾಖಲೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಕೇಳಿಕೊಂಡಿದ್ದಾರೆ. ಈಗಾಗಲೇ ದೇವರಾಜ ಅರಸು ಅವರಿಗಿಂತಲೂ ಹೆಚ್ಚಿನ ಕಾಲಾವಧಿಯ ಆಡಳಿತ ನಡೆಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿಲ್ಲ. ಸಿದ್ದರಾಮಯ್ಯ ಅವರು ಇಲ್ಲದೆ ಇದ್ದರೆ ಪರಿಸ್ಥಿತಿ ನಿರ್ವಹಣೆ ಮಾಡುವುದು ಕಷ್ಟ ಸಾಧ್ಯವಾಗಲಿದೆ. ಅದಕ್ಕಾಗಿ ಮುಂದಿನ ಐದು ತಿಂಗಳವರೆಗೂ ಮೌನವಾಗಿರಿ ಎಂದು ಹೈಕಮಾಂಡ್‌ ಸಲಹೆ ನೀಡಿದೆ ಎಂದು ತಿಳಿದು ಬಂದಿದೆ.

RELATED ARTICLES

Latest News