Homeರಾಷ್ಟ್ರೀಯBIG NEWS ಕರ್ನಾಟಕದ 4 ಸ್ಥಾನ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

BIG NEWS ಕರ್ನಾಟಕದ 4 ಸ್ಥಾನ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ನವದೆಹಲಿ, ಮೇ 22 (ಪಿಟಿಐ) ಸಂಸತ್‌ನಲ್ಲಿ ಖಾಲಿ ಇರುವ 24 ರಾಜ್ಯಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.ಚುನಾವಣಾ ಆಯೋಗವು ಜೂನ್‌ 18 ರಿಂದ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಘೋಷಿಸಿದೆ.

ಜೂನ್‌ 21 ರಿಂದ ಜುಲೈ 19 ರವರೆಗೆ ವಿವಿಧ ದಿನಾಂಕಗಳಲ್ಲಿ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.
ಆಂಧ್ರಪ್ರದೇಶ, ಗುಜರಾತ್‌ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸ್ಥಾನಗಳು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳು, ಜಾರ್ಖಂಡ್‌ನಲ್ಲಿ ಎರಡು ಸ್ಥಾನಗಳು ಮತ್ತು ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸ್ಥಾನಕ್ಕೆ ರಾಜ್ಯಸಭಾ ಚುನಾವಣೆ ನಡೆಯಲಿದೆ.

ನಾಮನಿರ್ದೇಶನಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್‌ 8 ಆಗಿರುತ್ತದೆ.

Election Commission announces Rajya Sabha polls for 24 seats

RELATED ARTICLES

Latest News