ನವದೆಹಲಿ, ಜೂ.3- ದಕ್ಷಿಣ ದೆಹಲಿಯ ಮಾಳವೀಯ ನಗರ ಪ್ರದೇಶದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಲೆಮನ್ ಗ್ರೀನ್ ರೆಸ್ಟೋರೆಂಟ್ ಎಂಬ ರೆಸ್ಟೋರೆಂಟ್‌ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಬೆಳಿಗ್ಗೆ ಸುಮಾರು 8.50 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು,ತಕ್ಷಣ ಹಲವು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ 18 ಮಂದಿಯಲ್ಲಿ ಕೆಲವರು ಉಸಿರುಗಟ್ಟಿ ,ಕೆಲವರು ಸುಟ್ಟ ಗಾಯದಿಂದ ಮೃತಪಟ್ಟಿದ್ದಾರೆ.ಬಹುತೇಖರು ವಿದೇಶಿ ಪ್ರಜೆಗಳು ಎಂದು ಗೊತ್ತಾಗಿದೆ. ನೆಲಮಾಳಿಗೆಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ.ಗಾಯಾಳುಗಳನ್ನು ಸಿಎಟಿಎಸ್ ಆಂಬುಲೆನ್ಸ್ ಗಳ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ತಕ್ಷಣದ ಮಾಹಿತಿ ಲಭ್ಯವಾಗಿಲ್ಲ.
ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.
ಅಗ್ನಿ ಅವಘಡದ ನಂತರ ಸ್ಥಳದಲ್ಲಿ ರಕ್ಷಣಾ ಹಾಗೂ ಪರಿಶೀಲನಾ ಕಾರ್ಯಾಚರಣೆ ಮುಂದುವರಿದಿದೆ.
