ಬೆಂಗಳೂರು,ಮೇ 23- ಬೈಕ್ಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಬಿಎಸ್ಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಶಾಂಕ್ನಾಯಕ್ (20) ಮೃತಪಟ್ಟ ವಿದ್ಯಾರ್ಥಿ. ಮೂಲತಃ ಶಿವಮೊಗ್ಗದವರಾದ ಈತ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದುಕೊಂಡು ನಗರದ ಕಾಲೇಜೊಂದರಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.
ಇಂದು ಬೆಳಗಿನ ಜಾವ 2 ಗಂಟೆ ಸುಮಾರಿನಲ್ಲಿ ಸುಶಾಂಕ್ ನಾಯಕ್ ಕೆಟಿಎಂ ಬೈಕ್ನಲ್ಲಿ ಔಟರ್ ರಿಂಗ್ ರೋಡ್ ಮೂಲಕ ಬರುತ್ತಿದ್ದಾಗ ಮಲ್ಲತ್ತಹಳ್ಳಿ ಬಸ್ ನಿಲ್ದಾಣದ ಕಲಾ ಗ್ರಾಮದ ಎದುರು ಗೂಡ್್ಸ ಆಟೋ ಡಿಕ್ಕಿ ಹೊಡೆದ ಪರಿಣಾಮ ಆತ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಸುದ್ದಿ ತಿಳಿದು ಜ್ಞಾನಭಾರತಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
