ಬೆಂಗಳೂರು, ಮಾ.30-ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ದಿನಗಳ ಕಾಲ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಏ.4ರಂದು ಹಾಗೂ ಬಾಗಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಏ.5ರಂದು ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರ ಕೈಗೊಂಡು ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ರಾಜ್ಯದ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡದೇ ಎನ್‌ಡಿಎಗೆ ಬೆಂಬಲ ಸೂಚಿಸಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಈ ಅಭ್ಯರ್ಥಿಗಳ ಪರ ಕುಮಾರಸ್ವಾಮಿ ಅವರಲ್ಲದೆ, ಜೆಡಿಎಸ್ ಶಾಸಕರು, ಸಂಸದರು, ಮಾಜಿ ಸಚಿವರು, ಶಾಸಕರು ಹಾಗೂ ನಾಯಕರು ಚುನಾವಣಾ ಪ್ರಚಾರ ಕೈಗೊಂಡು ಎನ್‌ಡಿಎ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರು ಸ್ಪ ರ್ಸಿದ್ದಾರೆ. ಇವರು ಎನ್‌ಡಿಎ ಅಭ್ಯರ್ಥಿಯಾಗಿರುವುದರಿಂದ ಕುಮಾರಸ್ವಾಮಿ ಅವರು ಒಂದು ದಿನ ಅಂದರೆ ಏ.4ರಂದು ಈ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಹಾಗೆಯೇ ಏ.5ರಂದು ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪ ರ್ಸಿರುವ ಚರಂತಿಮಠ ವೀರಭದ್ರಯ್ಯ ಅವರ ಪರವಾಗಿ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎನ್‌ಡಿ ಎ ಅಭ್ಯರ್ಥಿಗಳ ಪರವಾಗಿ ಬಿಜೆಪಿ ನಾಯಕರ ಜತೆಗೂಡಿ ಪ್ರಚಾರ ಕೈಗೊಂಡು ಮತ ಯಾಚನೆ ಮಾಡಲಿದ್ದಾರೆ.
ಆದರೆ, ಎರಡು ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳುವ ದಿನಾಂಕ ನಿಗದಿಯಾಗಿದೆ. ಆದರೆ. ಆಯಾ ಕ್ಷೇತ್ರದ ಯಾವ ಪ್ರದೇಶದಲ್ಲಿ ಪ್ರಚಾರ ನಡೆಸಬೇಕು ಎಂಬುದು ಇನ್ನೂ ಅಂತಿಮಗೊಂಡಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
