Homeರಾಷ್ಟ್ರೀಯದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲಗೊಳ್ಳುತ್ತಿದೆ : ಪ್ರಿಯಾಂಕಾ ವಾದ್ರಾ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲಗೊಳ್ಳುತ್ತಿದೆ : ಪ್ರಿಯಾಂಕಾ ವಾದ್ರಾ

ನವದೆಹಲಿ,ಅ.11- ಭಾರತದಲ್ಲಿ ಪ್ರಜಾಪ್ರಭುತ್ವದ ತತ್ವಗಳನ್ನು ದುರ್ಬಲಗೊಳಿಸುತ್ತಿದೆ ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರತಿಭಟನಾಕಾರರು ಮತ್ತು ವಿರೋಧ ಪಕ್ಷದ ನಾಯಕರ ಸಾಂವಿಧಾನಿಕ ಹಕ್ಕುಗಳನ್ನು ಸರ್ಕಾರ ಉಲ್ಲಂಘಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಜಾಗೊಳಿಸುವಂತೆ ಒತ್ತಾಯಿಸಿ ಪ್ರತಿಭಟಿಸುತ್ತಿದ್ದ ಸಾವಿರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ, ಪ್ರಸ್ತುತ ಎನ್‌ಡಿಎ ಸರ್ಕಾರವು ಭಾರತದ ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸುತ್ತಿದೆ. ಹೋರಾಟಗಾರರು ವಿರುದ್ದ ಕ್ರಮ ಕೈಗೊಳ್ಳಲಾಗಿತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲಗೊಳ್ಳುತ್ತಿದೆ. ಭಾರತವು ಈಗ ಸರ್ವಾಧಿಕಾರದ ಆಳ್ವಿಕೆಯಲ್ಲಿದೆ ಎಂದು ಗುಡುಗಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವಲ್ಲಿ ಸರ್ಕಾರಕ್ಕೆ ಬೆಂಬಲ ನೀಡುತ್ತಿರುವವರು ದೇಶದ್ರೋಹ ಎಸಗುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಅವರೊಂದಿಗೆ ಶಾಮೀಲಾಗಿರುವವರೆಲ್ಲರೂ ದೇಶ ದ್ರೋಹಿಗಳು ಎಂದು ಕಿಡಿಕಾರಿದ್ದಾರೆ. ಭಾರತವು ಇನ್ನು ಮುಂದೆ ಪ್ರಜಾಪ್ರಭುತ್ವವಾಗಿ ಉಳಿದಿಲ್ಲ. ಇದು ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಅವರಿಂದ ನಡೆಸಲ್ಪಡುತ್ತಿರುವ ಸರ್ವಾಧಿಕಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RELATED ARTICLES
spot_img

Latest News