Homeಅಂತಾರಾಷ್ಟ್ರೀಯಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಕಣ್ಮರೆ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಕಣ್ಮರೆ

ಕ್ಯಾಲಿಫೋರ್ನಿಯಾ,ಫೆ. 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಿಗೂಢವಾಗಿ ಕಾಣೆಯಾಗಿದ್ದಾರೆ. ಮಾಸ್ಟರ್ಸ್‌ ವಿದ್ಯಾರ್ಥಿಯಾಗಿರುವ 22 ವರ್ಷದ ಸಾಕೇತ್‌ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ.

ಸಾಕೇತ್‌ ಶ್ರೀನಿವಾಸಯ್ಯಅಮೆರಿಕದ ಯೂನಿವರ್ಸಿಟಿ ಆಫ್‌ ಕ್ಯಾಲಿಫೋರ್ನಿಯಾ, ಬರ್ಕ್‌ಲೇಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಫೆ.10ರಂದು ಡ್ವೈಟ್‌ ವೇ ಪ್ರದೇಶದಲ್ಲಿ ಕೊನೆಯಾಗಿ ಕಾಣಿಸಿಕೊಂಡಿದ್ದರು ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಸಾಕೇತ್‌ ಕಾಣೆಯಾಗಿರುವ ಬಗ್ಗೆ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಆತಂಕ ವ್ಯಕ್ತಪಡಿಸಿದೆ. ಸಾಕೇತ್‌ನ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ವಿದ್ಯಾರ್ಥಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೂತಾವಾಸ ಕಚೇರಿ ಹೇಳಿದೆ.

ಸಾಕೇತ್‌ ಸುಮಾರು 6. 1ಅಡಿ ಎತ್ತರ ಹೊಂದಿದ್ದು, ಕಪ್ಪು ಕೂದಲು ಮತ್ತು ಕಂದು ಬಣ್ಣದ ಕಣ್ಣುಗಳನ್ನು ಹೊಂದಿದ್ದಾರೆ. ಸಾಕೇತ್‌ ಅಪಾಯದ ಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಯಾರಿಗಾದರೂ ಮಾಹಿತಿ ದೊರೆತರೆ ತಕ್ಷಣ ತಿಳಿಸಲು ಬರ್ಕ್‌ಲೇ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾಕೇತ್‌ ಕೆಮಿಕಲ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿದ್ದು, ಚೆನ್ನೈನ ಮದ್ರಾಸ್‌‍ ಐಐಟಿಯಲ್ಲಿ ಬಿ.ಟೆಕ್‌ ಮಾಡಿದ್ದರು. ಪ್ರಸ್ತುತ ಅವರು ಪ್ರಾಡಕ್ಟ್‌ ಡೆವಲಪ್‌ಮೆಂಟ್‌‍ ಕಾರ್ಯಕ್ರಮದಡಿ ಯುನಿವರ್ಸಿಟಿ ಆಫ್‌ ಕ್ಯಾಲಿಫೋರ್ನಿಯಾ, ಬರ್ಕ್‌ಲೇಯಲ್ಲಿ ಮಾಸ್ಟರ್‌ ಆಫ್‌ ಸೈನ್‌್ಸ ವ್ಯಾಸಂಗ ಮಾಡುತ್ತಿದ್ದರು.

ಸಾಕೇತ್‌ ಡೀಪ್‌-ಟೆಕ್‌, ಸೆಮಿಕಂಡಕ್ಟರ್‌ ಹಾಗೂ ಅಡ್ವಾನ್‌್ಸ್ಡ ಮೆಟೀರಿಯಲ್‌್ಸ ಕ್ಷೇತ್ರಗಳ ಬಗ್ಗೆ ಆಸಕ್ತಿ ಹೊಂದಿರುವುದಾಗಿ ಹೇಳಿಕೊಂಡಿದ್ದರು.

RELATED ARTICLES

Latest News