ಮೈಸೂರು, ಡಿ.17- ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್‌ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನಾ ಐಪಿಎಲ್ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಸಹ ಈ ಬಗ್ಗೆ ಮಾತುಕತೆ ನಡೆಸುತ್ತಿದೆ. ಪ್ರತಿ ವರ್ಷ ಐಪಿಎಲ್ ಟೋಫಿ ಗೆದ್ದ ಹೋಮ್ ಗ್ರೌಂಡ್‌ನಲ್ಲೇ ಉದ್ಘಾಟನೆ ಪಂದ್ಯ ನಡೆಯುತ್ತಿತ್ತು.
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿದ್ದವು. ಹೀಗಾಗಿ ನಮ ತಂಡ ಚುನಾವಣೆ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಗೃಹ ಸಚಿವರ ಜೊತೆ ಫೋನ್ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದೆ. ಬೆಂಗಳೂರಿನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯುತ್ತವೆ ಎಂದು ಮಾಹಿತಿ ನೀಡಿದರು.
ಇನ್ನು ವಿಜಯ್ ಹಜಾರೆ ಪಂದ್ಯಕ್ಕೆ ವಿರಾಟ್ ಕೊಹ್ಲಿ ಬೆಂಗಳೂರಿಗೆ ಬರಲಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಮೂರು ಕ್ರೀಡಾಂಗಣಗಳು ಬೆಂಗಳೂರಿನಲ್ಲಿವೆ. ಡೆಲ್ಲಿ ತಂಡದಿಂದ ಈ ಬಾರಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಪಂದ್ಯ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಎಲ್ಲಾ ಮಾತುಕತೆಗಳು ನಡೆಯುತ್ತಿವೆ ಎಂದರು.
ಕಳೆದ ಮೂರು ವರ್ಷಗಳಿಂದ ಕ್ಲಬ್‌ನಲ್ಲಿ ಸಾಕಷ್ಟು ಗೊಂದಗಳಾಗಿದ್ದು, ಎಲ್ಲಾ ಗೊಂದಲಗಳನ್ನು ನಮ ತಂಡ ಬಗೆಹರಿಸಿ ಉತ್ತಮ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.
