ಹಾಸನ,ಜ.21- ಪ್ರಾದೇಶಿಕ ಹಿನ್ನೆಲೆಯುಳ್ಳ ಜೆಡಿಎಸ್ ಪಕ್ಷಕ್ಕೆ 25 ರ‍್ಷಗಳು ತುಂಬಿರುವುದರಿಂದ ಬೆಳ್ಳಿಹಬ್ಬ ಆಚರಿಸುತ್ತಿದ್ದು, ಜ.24 ರಂದು ಹಾಸನದಲ್ಲಿ ಸಮಾವೇಶ ನಡೆಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾರ್ಗರ್ಶನದಂತೆ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಬೆಳ್ಳಿಹಬ್ಬ ಆಚರಣೆಗೆ ಚಾಲನೆ ನೀಡಲಾಗಿತ್ತು ಎಂದರು.
ಈ ಸಮಾವೇಶದ ಮೂಲಕ ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ತಯಾರಾಗುವಂತೆ ಸಂದೇಶ ನೀಡಲಾಗುವುದು. ಸಂಭ್ರಮದ ರೀತಿಯಲ್ಲಿ ಈ ಸಮಾವೇಶ ಮಾಡುತ್ತಿದ್ದು, ಕರ‍್ಯರ‍್ತರಲ್ಲಿ ಉತ್ಸಾಹ ಉಂಟಾಗಿದೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಹಾಸನ ಜಿಲ್ಲೆಯಲ್ಲಿ ಎರಡು ಸಭೆ ನಡೆಸಿದ್ದು, ಮುಖ್ಯಮಂತ್ರಿ ಸೇರಿದಂತೆ ಸಚಿವರು ಭಾಗವಹಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಮುಗಿಸಬೇಕು ಎಂದು ಏನೆಲ್ಲಾ ಮಾಡುತ್ತಿದ್ದಾರೆ ಎಂಬುದನ್ನು ಸೂಕ್ಷ್ಮವಾಗಿ ಎರಡೂವರೆ ರ‍್ಷದಿಂದ ಗಮನಿಸಿದ್ದೇನೆ. ಮುಂದಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಕರ‍್ಯಕ್ರಮವನ್ನು ಹಮಿಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಹಾಸನ ಜಿಲ್ಲೆ ಜನರ ಆಶರ‍್ವಾದದಿಂದ ದೇವೇಗೌಡರು ಕೆಂಪು ಕೋಟೆ ಮೇಲೆ ರಾಷ್ಟ್ರ ಧ್ವಜಾರೋಹಣ ಮಾಡಿದ್ದಾರೆ. ಆ ಶಕ್ತಿ ಬಂದಿದ್ದು ಹಾಸನ ಜಿಲ್ಲೆಯವರು ನೀಡಿದ ಶಕ್ತಿಯಿಂದ. ಹೀಗಾಗಿ ಗೌಡರಿಗೂ, ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ ಎಂದರು.
ಸರ್ಕಾರದ ವಿರುದ್ಧ ವಾಗ್ದಾಳಿ :
ದೇಶ ಹಾಗೂ ರಾಜ್ಯದಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ನೋಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಗಾದಿಯ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಅದು ಆಡಳಿತ ಪಕ್ಷದಲ್ಲಿ ನಡೆಯುತ್ತಿರುವ ಕರ‍್ಚಿಯ ಕಲಹ. ಐದು ಕಡೆಗಳಲ್ಲಿ ಅಹಿಂದ ಸಮಾವೇಶ ನಡೆಸಲು ಹೊರಟಿದ್ದಾರೆ. ಮುಖ್ಯಮಂತ್ರಿ ಹಾಗೂ ಅಹಿಂದ ಸಂಘಟನೆಗಳಿಗೆ ಕೇಳುವುದೇನೆಂದರೆ 2003, 2023 ರಿಂದ 2025 ರವರೆಗೆ 3 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ 1,64,000 ಓಬಿಸಿ ಮತ್ತು ಮುಸ್ಲಿಂ ಸಮುದಾಯದ ವಿದ್ಯರ‍್ಥಿಗಳಿಗೆ ವಿದ್ಯರ‍್ಥಿವೇತನವೇ ಸಿಕ್ಕಿಲ್ಲ. ಹಣ ಬಿಡುಗಡೆ ಮಾಡದೇ ವಂಚನೆ ಮಾಡಿದ್ದಾರೆ. ಈ ಸರ್ಕಾರರದಿಂದ ಅಹಿಂದಾ ರ‍್ಗಕ್ಕೆ ದ್ರೋಹವಾಗುತ್ತಿದೆ. ಅಹಿಂದ ಹೆಸರನ್ನು ಮುಖ್ಯಮಂತ್ರಿ ಕರ‍್ಚಿ ಗಟ್ಟಿ ಮಾಡಿಕೊಳ್ಳಲು ಉಪಯೋಗ ಮಾಡಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದರು.
