ಬೆಂಗಳೂರು, ಜು.26-ನಮ್ಮ ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ, ಹೆಮ್ಮೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ನಗರದ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಇಂದು ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ ರಾಜ್ಯದಲ್ಲಿ ನೆಲೆಸಿರುವ ಲಕ್ಷಾಂತರ ಯೋಧರ ಕುಟುಂಬಗಳ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಲಹೆಗಳು ಏನೇ ಇದ್ದರೂ ನಮಗೆ ನೀಡಿ. ನಿಮ್ಮ ಸಲಹೆ ಸ್ವೀಕರಿಸಲು ನಮ್ಮ ಸರ್ಕಾರ ಮುಕ್ತವಾಗಿದೆ ಎಂದು ತಿಳಿಸಿದರು.
27 ವರ್ಷಗಳ ಹಿಂದೆ ನಮ್ಮ ವೀರ ಯೋಧರು ಹಿಮಾಲಯದ ತಪ್ಪಲಿನಲ್ಲಿ ಶತ್ರುಗಳನ್ನು ಸದೆ ಬಡಿದು ದೇಶದ ತ್ರಿವರ್ಣ ಧ್ವಜ ಹಾರಿಸಿದರು. ನಮ ಹೀರೋಗಳು ಹುತಾತರಾಗಿರಬಹುದು. ಆದರೆ ಅವರ ಪರಂಪರೆ ಶಾಶ್ವತ, ದೇಶಕ್ಕಾಗಿ ಹುತ್ಮತರಾದ ನಮ ವೀರ ಯೋಧರಿಗೆ ಹೃತ್ಪೂರ್ವಕ ನಮನ ಎಂದು ತಿಳಿಸಿದರು. ನಮ ತಾಯ್ನಾಡನ್ನು ರಕ್ಷಿಸಲು 527 ಯೋಧರು ಹುತಾತರಾಗಿದ್ದಾರೆ. ಅದರಲ್ಲಿ ಕರ್ನಾಟಕದ 13 ಯೋಧರು ಸೇರಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಿಂದ ಬಂದಿದ್ದು, ಕಾಂಗ್ರೆಸ್ ಇತಿಹಾಸವು ದೇಶದ ಇತಿಹಾಸ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನಮ ಯೋಧರು ಎಲ್ಲಾ ಪರಿಸ್ಥಿತಿಯಲ್ಲೂ ದೇಶದ ರಕ್ಷಣೆಗೆ ಬದ್ಧರಾಗಿದ್ದಾರೆ. ಭಾರತ-ಪಾಕಿಸ್ತಾನ ಯುದ್ಧವಾಗಿರಲಿ, ಭಾರತ-ಚೀನಾ ಯುದ್ಧವಾಗಲಿ, ಗಡಿ ಅತಿಕ್ರಮಣ ಪರಿಸ್ಥಿತಿಯೇ ಆಗಿರಲಿ, ನಮ ಯೋಧರು ಕೆಚ್ಚೆದೆಯಿಂದ ದೇಶದ ಗಡಿ ರಕ್ಷಣೆಗೆ ಪ್ರತಿ ಕ್ಷಣ, ದಿನವೂ ಸಿದ್ಧರಾಗಿರುತ್ತಾರೆ ಎಂದು ಅವರು ಬಣ್ಣಿಸಿದರು.
ಕರ್ನಾಟಕ ನಮ್ಮ ರಕ್ಷಣಾ ವಲಯದ ಬೆನ್ನೆಲುಬು: ಯೋಧರಿಂದಾಗಿ ನಾವು ನಮ ಮನೆಗಳಲ್ಲಿ ನೆಮ್ಮದಿಯಾಗಿ ಮಲಗುತ್ತಿದ್ದೇವೆ. ಭಾರತದ ರಕ್ಷಣಾ ಪಡೆಗೆ ಕರ್ನಾಟಕ ಬೆನ್ನೆಲುಬಾಗಿದೆ. ಬೆಮೆಲ್, ಡಿಆರ್‌ಡಿಒ, ಇಸ್ರೋ ಸೇರಿದಂತೆ ಅನೇಕ ಸಂಸ್ಥೆಗಳು ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿವೆ. ನಾವು ಭಾರತದ ಮೊದಲ ಸೇನಾ ಮುಖ್ಯಸ್ಥರಾದ ಫೀಲ್‌್ಡ ಮಾರ್ಷಲ್ ಕಾರಿಯಪ್ಪ ಅವರ ಕೊಡುಗೆ ಮರೆಯಲು ಸಾಧ್ಯವಿಲ್ಲ ಎಂದರು.
ಯೋಧರು, ಯುವಕರು, ಮಹಿಳೆಯರು, ರೈತರು ಹಾಗೂ ತೆರಿಗೆದಾರರು ನಮ ಕೈಯಲ್ಲಿರುವ ಐದು ಬೆರಳುಗಳಂತೆ. ಈ ಬೆರಳುಗಳು ಸೇರಿದರೆ ದೇಶ ಬಲಿಷ್ಠ ಮುಷ್ಟಿಯಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ ಬಹಳ ವಿಶೇಷವಾದ ದಿನ. ದೇಶದ ಸ್ವಾತಂತ್ರ್ಯ ಕಾಪಾಡಲು ಏನು ಬೇಕಾದರೂ ಮಾಡಬಲ್ಲೆವು ಎಂಬುದನ್ನು ದೇಶದ ಯುವಕರು ಸಾಬೀತುಪಡಿಸಿದ್ದಾರೆ. ದೇಶದ ಹೊರಗಿನ ಹಾಗೂ ಒಳಗಿನ ದುಷ್ಟ ಶಕ್ತಿಗಳಿಂದ ಭಾರತ ಮಾತೆಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಅವರು ಹೇಳಿದರು.
