ಬೆಂಗಳೂರು,ಡಿ.5- ಮೆಟ್ರೋ ರೈಲಿನ ಹಳಿ ಮೇಲೆ ಹಾರಿ ವ್ಯಕ್ತಿಯೊಬ್ಬ ಆತಹ*ತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತನನ್ನು ಮೂಲತಃ ವಿಜಯಪುರದ ದೇವರಹಿಪ್ಪರಗಿಯ ಶಾಂತ ನಗೌಡ (38) ಎಂದು ಗುರುತಿಸಲಾಗಿದೆ.
ದೊಡ್ಡಬೆಲೆಯಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ ಅವರು ಇಂಜಿನಿಯರಿಂಗ್ ಪದವೀಧರ ಎಂದು ಗೊತ್ತಾಗಿದೆ.
ಬಿಡದಿಯ ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಕಳೆದ ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದರು. ಇತ್ತೀಚೆಗೆ ಬೇರೊಂದು ಕಂಪನಿಗೆ ಸೇರಿ ಕೆಲಸ ಮಾಡುತ್ತಿದ್ದರು ಎಂದು ಶಾಂತನಗೌಡರ ಪತ್ನಿ ಪ್ರೀತಿ ಅವರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಸುಮಾರು 8.15 ರ ಸುಮಾರಿಗೆ ಮೆಟ್ರೋ ರೈಲು ಕೆಂಗೇರಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅದರ ಮುಂದೆ ಏಕಾಏಕಿ ವಿದ್ಯುತ್ ಹಳಿಗೆ ಮೇಲೆ ಜಿಗಿದು ಶಾಂತಗೌಡ ಆತಹತ್ಯೆಮಾಡಿಕೊಂಡಿದ್ದಾರೆ. ಘಟನೆ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲ ಕಾಲ ನಿಲ್ಲಿಸಲಾಗಿತ್ತು. ಇದನ್ನು ಕಂಡ ಕೆಲ ಪ್ರಯಾಣಿಕರು ಜೋರಾಗಿ ಕೂಗಿಕೊಂಡು ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದಾಗಿ ಮೈಸೂರು ರಸ್ತೆ-¬ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು.
ಘಟನೆ ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿ ಪರಿಶೀಲನೆ ಕೈಗೊಂಡು ಮೃತದೇಹವನ್ನು ಹಳಿಯಿಂದ ಮೇಲೆತ್ತಿ ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರ ಪ್ರಕಾರ, ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದ ಅವರು ಇದರಿಂದ ನೊಂದು ಆತಹ*ತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ.
ಘಟನೆಯಿಂದಾಗಿ ನೇರಳೆ ಮಾರ್ಗದ ಮೆಟ್ರೋ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸ್ವಲ್ಪ ಸಮಯದ ನಂತರ ಮೈಸೂರು ರಸ್ತೆಯಿಂದ ವೈಟ್ಫೀಲ್‌್ಡ ಕಡೆಗೆ ರೈಲು ಸಂಚಾರವನ್ನು ಆರಂಭಿಸಲಾಯಿತು. ಮಧ್ಯಾಹ್ನದವರೆಗೂ ಕೆಂಗೇರಿ ಮತ್ತು ಚಲ್ಲಘಟ್ಟ ನಡುವಿನ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಈ ನಡುವೆ ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಬಿಎಂಆರ್ಸಿಎಲ್ ಎಕ್‌್ಸ ಸಂದೇಶದ ಮೂಲಕ ತಿಳಿಸಿದೆ. ಕೆಂಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
