ನವದೆಹಲಿ, ಸೆ.1- ಉಕ್ರೇನ್ ವಿರುದ್ಧದ ಸಂಘರ್ಷ ಕೊನೆಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಯುದ್ಧ ಕೊನೆಗಾಣಿಸಲು ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ತಿಳಿಸಿರುವುದಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.
ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಹೊರತಾಗಿ ಪುಟಿನ್ ಮತ್ತು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗಿನ ಮೋದಿ ಅವರ ಸಭೆಗಳ ಕುರಿತು ಮಿಸ್ರಿ ಮಾಹಿತಿ ನೀಡಿದ್ದಾರೆ. ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ಸಾಧ್ಯವಾದಾಗಲೆಲ್ಲಾ ಕ್ರಮ ಕೈಗೊಳ್ಳಲು ಭಾರತದ ಸಿದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದೇ ರೀತಿ ಈ ಸಂಘರ್ಷವನ್ನು ಅಂತ್ಯದತ್ತ ಕೊಂಡೊಯ್ಯಲು ಸಾಧ್ಯವಿರುವ ಎಲ್ಲವನ್ನೂ ಮಾಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿಗಳು ಅಧ್ಯಕ್ಷ ಪುಟಿನ್ ಅವರಿಗೆ ಪುನರುಚ್ಚರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಿನ್ನೆ ಕಿರ್ಗಿಸ್ತಾನ್ ಭೇಟಿ ಸಂದರ್ಭದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷರಿಗೆ ಮತ್ತೆ ಶಾಂತಿಪಾಠ ಹೇಳಿದರು. ಯುದ್ಧಕ್ಕಾಗಿ ಖರ್ಚು ಮಾಡುವ ಪ್ರತಿ ದಿನವೂ ಮಾನವೀಯತೆಯನ್ನ ಹಿಂದೆ ಸರಿಯುತ್ತದೆ. ಹಾಗಾಗಿ ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದ ಕಡೆಗೆ ಸಾಗಬೇಕು ಎಂದು ಕರೆ ನೀಡಿದರು. ಸಂಘರ್ಷಗಳನ್ನು ಪರಿಹರಿಸುವಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆ ಕೇಂದ್ರವಾಗಿದೆ ಎಂಬ ಭಾರತದ ನಿಲುವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.ವಾರ್ಷಿಕ ಬ್ರಿಕ್‌್ಸ ಶೃಂಗಸಭೆಯಲ್ಲಿ ಭಾಗವಹಿಸಲು ಪುಟಿನ್ ಭಾರತಕ್ಕೆ ಪ್ರಯಾಣಿಸುವ 1 ವಾರಕ್ಕೂ ಮುನ್ನವೇ ಉಭಯ ನಾಯಕರ ನಡುವೆ ಈ ಮಾತುಕತೆಗಳು ನಡೆದಿವೆ.
Modi implores tense Putin to end Ukraine war
