Homeರಾಜ್ಯಪಾದಯಾತ್ರೆಗೆ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್‌

ಪಾದಯಾತ್ರೆಗೆ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್‌

ಬೆಂಗಳೂರು, ಆ.9-ರಾಜ್ಯ ಕಾಂಗ್ರೆಸ್‌‍ ಸರ್ಕಾರದ ಉದ್ದೇಶಿತ ರೈತ ವಿರೋಧಿ ಬಿಡದಿ ಟೌನ್‌ಶಿಪ್‌‍ ಯೋಜನೆಯನ್ನು ವಿರೋಧಿಸಿ ಪಾದಯಾತ್ರೆ ಕೈಗೊಳ್ಳುವ ಮುನ್ನ ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌‍ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಆಶೀರ್ವಾದ ಪಡೆದರು.

ನಿಖಿಲ್‌ ಕುಮಾರಸ್ವಾಮಿ ಅವರು ಪದನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಪಾದಯಾತ್ರೆಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಿಖಿಲ್‌ ಅವರ ತಲೆಯ ಮೇಲೆ ಕೈಯಿಟ್ಟು ಆಶೀರ್ವದಿಸಿದರು. ರೈತರ ಹಿತಕ್ಕಾಗಿ, ರೈತರ ಭೂಮಿಯನ್ನು ಉಳಿಸಲು ದೃಢವಾಗಿ ನಿಂತು ಹೋರಾಟ ಮಾಡಿ. ಜನರ ಬೆಂಬಲ ನಿಮೊಂದಿಗಿದೆ ಎಂದು ದೇವೇಗೌಡರು ನಿಖಿಲ್‌ ಕುಮಾರಸ್ವಾಮಿ ಅವರಿಗೆ ಶುಭ ಹಾರೈಸಿದರು.

RELATED ARTICLES
spot_img

Latest News