ಬೆಂಗಳೂರು,ಆ.9- ಆಪರೇಷನ್ ಮುಕ್ತ ಹೆಸರಿನಲ್ಲಿ ನಿನ್ನೆ ನಗರದ ವೈಟ್ಫೀಲ್್ಡ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 105 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವೈಟ್ಫೀಲ್್ಡ ವಿಭಾಗದಲ್ಲಿ 62 ಮಂದಿ ಮತ್ತು ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ 43 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಅವರ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ನಿನ್ನೆ ಮುಂಜಾನೆ ಅಧಿಕಾರಿಗಳು ಸೇರಿದಂತೆ 500ಕ್ಕೂ ಹೆಚ್ಚು ಸಿಬ್ಬಂದಿ ಕಾಡುಗೋಡಿ, ವೈಟ್ಫೀಲ್್ಡ, ಮಾರತಹಳ್ಳಿ, ಬೇಗೂರು, ಎಲೆಕ್ಟ್ರಾನಿಕ್ ಸಿಟಿ, ವರ್ತೂರು, ಹೆಬ್ಬಗೋಡಿ ಮುಂತಾದ 50ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಶೆಡ್ಗಳಲ್ಲಿ ವಾಸವಾಗಿದ್ದ ಸುಮಾರು 2000ಕ್ಕೂ ಹೆಚ್ಚು ಜನರನ್ನು ಕರೆತಂದು ಅವರುಗಳನ್ನು ವಿಚಾರಣೆಗೊಳಪಡಿಸಿ ಅವರುಗಳ ಬಳಿ ಇದ್ದ ದಾಖಲೆಗಳ ಪರಿಶೀಲನೆ ನಡೆಸಿ ಈಗ 105 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ 105 ಮಂದಿ ಸರಿಯಾದ ದಾಖಲೆಗಳನ್ನು ನೀಡದಿದ್ದರೆ ಅವರುಗಳನ್ನು ಎಫ್ಆರ್ಆರ್ಒ ಮುಂದೆ ಹಾಜರುಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ. ಮುಂದೆಯೂ ಸಹ ಇದೇ ರೀತಿ ಆಪರೇಷನ್ ಮುಕ್ತ ಕಾರ್ಯಾಚರಣೆ ನಡೆಯಲಿದೆ ಎಂದು ಅವರು ಹೇಳಿ ದ್ದಾರೆ. ನಗರದಲ್ಲಿ ಯಾರೇ ಆದರೂ ಅಕ್ರಮವಾಗಿ ನೆಲೆಸಿದ್ದರೆ ಅವರನ್ನು ಪತ್ತೆಹಚ್ಚಿ ಗಡಿಪಾರು ಮಾಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅಕ್ರಮ ಬಾಂಗ್ಲಾ ನಿವಾಸಿಗಳಿಗೆ ಜಾಗ ನೀಡಿದರೆ ಮುಲಾಜಿಲ್ಲದೆ ಕ್ರಮ
ಬೆಂಗಳೂರು,ಆ.9- ಅಕ್ರಮ ಬಾಂಗ್ಲಾ ವಲಸಿಗರಿಗೆ ವಾಸಿಸಲು ಜಾಗ ನೀಡಿ ಶೆಡ್ ನಿರ್ಮಿಸಿಕೊಡುವ ಮಾಲೀಕರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಽಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರುಗಳು ಹಣದ ಆಸೆಗಾಗಿ ಕೆಲವು ಮಾಲೀಕರು ಶೆಡ್ಗಳನ್ನು ನಿರ್ಮಿಸಿ ಕೊಡುತ್ತಿದ್ದಾರೆ. ತಾವು ಯಾರಿಗೆ ಶೆಡ್ಗಳನ್ನು ಬಾಡಿಗೆಗೆ ನೀಡುತ್ತೇವೆ ಎಂಬುದು ಸಹ ಪರಿಶೀಲಿಸುತ್ತಿಲ್ಲ. ಹೀಗಾಗಿ ನಗರದ ಬಹುತೇಕ ಕಡೆ ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂದು ವಿವರಿಸಿದರು.
ನಿನ್ನೆ ನಡೆಸಿದ ಆಪರೇಷನ್ ಮುಕ್ತ ಕಾರ್ಯಾಚರಣೆ ಸಂದರ್ಭದಲ್ಲಿ ಇಂಥ ವಿಷಯಗಳು ಕಂಡುಬಂದಿವೆ. ಶೆಡ್ಗಳನ್ನು ನಿರ್ಮಿಸಿ ಬಾಡಿಗೆ ನೀಡುವ ಮಾಲೀಕರು ಎಚ್ಚರಿಕೆಯಿಂದ ಇರಬೇಕು. ಅಲ್ಲಿ ಯಾರು ವಾಸಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು. ಅಕ್ರಮ ನುಸುಳುಕೋರರು ನಗರದಲ್ಲಿ ನೆಲಸಲು ಮನೆ ಹಾಗೂ ಶೆಡ್ಗಳನ್ನು ಬಾಡಿಗೆ ನೀಡುವ ಮಾಲೀಕರುಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅಽಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನಿನ್ನೆ ದಾಳಿಯ ಸಂದರ್ಭದಲ್ಲಿ ಅಕ್ರಮ ವಲಸಿಗರಿಗೆ ಶೆಡ್ ನಿರ್ಮಿಸಿ ಕೊಟ್ಟಿರುವುದು ಕಂಡುಬಂದಿದೆ. ಅವರ ವಿರುದ್ಧ ಪ್ರಕರಣ ದಾಖಲಿ ಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
