ಬೆಂಗಳೂರು,ಡಿ.20- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ ನೀಡಲಾಗುತ್ತದೆ.
ದೇವನಹಳ್ಳಿ ತಾಲ್ಲೂಕಿನ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ನಡೆಯುವ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೇರಿಸಲಿದ್ದಾರೆ.
ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಉಪಸ್ಥಿತರಿರಲಿದ್ದಾರೆ.
ಸಂಸದ ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ಎನ್ ನಾಗರಾಜ್ (ಎಂ.ಟಿ.ಬಿ), ರಾಮೋಜಿಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್, ದೇವನಹಳ್ಳಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ ಜಗನ್ನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷಗುಪ್ತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾರಾದ ಶಿವಕುಮಾರ್ ಕೆ.ಬಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕ ಅವಿನಾಶ್ ಮೆನನ್ ರಾಜೇಂದ್ರನ್, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನೂಲ) ಆಡಳಿತಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಪಿ.ಸಿ.ಜಾಫರ್, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ .ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ.ಬಾಬಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಸೀಮಾ ರುದ್ರಪ್ಪ ಮಾಬಳೆ, ತಾಲ್ಲೂಕು ಅಧಿಕಾರಿಗಳಾದ ಮುತಾಹೀರ್ ಹಫೀಸ್ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಆರೋಗ್ಯ ಇಲಾಖೆ ಎಲ್ಲಾ ಕಾರ್ಯಕ್ರಮಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
