ತುಮಕೂರು,ಜ.21- ರ‍್ನಾಟಕ ರತ್ನ, ಪದಭೂಷಣ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ರ‍್ಷದ ಪುಣ್ಯ ಸಂಸರಣೋತ್ಸವ ಅಂಗವಾಗಿ ಶ್ರೀಗಳ ಗದ್ದುಗೆಗೆ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಇಂದು ಮುಂಜಾನೆ ವಿವಿಧ ಪೂಜಾ ಕರ‍್ಯಗಳು ನೆರವೇರಿದವು.
ಲಿಂಗೈಕ್ಯ ಶ್ರೀಗಳ ಗದ್ದುಗೆಗೆ ವಿವಿಧ ಬಗೆಯ ಫಲ-ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಿದ್ದು, ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಯವರ ದಿವ್ಯ ಸಾನ್ನಿಧ್ಯದಲ್ಲಿ ಹರಗುರು ಚರಮರ‍್ತಿಗಳ ಸಮುಖದಲ್ಲಿ ಗದ್ದುಗೆಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂರ‍್ಯಗಳು ರ‍್ಥಪರ‍್ಣವಾಗಿ ನೆರವೇರಿದವು. ನಂತರ ಭವ್ಯವಾಗಿ ಅಲಂಕರಿಸಿದ ರಥದಲ್ಲಿ ಶ್ರೀಗಳ ಪುತ್ಥಳಿಯನ್ನು ವೀರಗಾಸೆ, ಪರ‍್ಣಕುಂಭ ಕಳಸ, ನಂದಿಧ್ವಜ ಸೇರಿದಂತೆ ವಿವಿಧ ಜಾನಪದ ಕಲಾಮೇಳಗಳೊಂದಿಗೆ ಮಠದ ಆವರಣದಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು.

ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್‌ಎಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಹೆಲಿಕಾಪ್ಟರ್ ಮೂಲಕ ತುಮಕೂರು ವಿವಿಗೆ ಹೆಲಿಪ್ಯಾಡ್‌ಗೆ ಆಗಮಿಸಿದಾಗ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಆತೀಯವಾಗಿ ಬರಮಾಡಿಕೊಂಡರು.
ನಂತರ ಸಿದ್ಧಗಂಗಾ ಮಠಕ್ಕೆ ತೆರಳಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಆಶರ‍್ವಾದ ಪಡೆದು ಮಠದ ಆವರಣದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಆಯೋಜಿಸಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 7ನೇ ಪುಣ್ಯ ಸಂಸರಣೋತ್ಸವ ಕರ‍್ಯಕ್ರಮವನ್ನು ಉದ್ಘಾಟಿಸಿ ಶ್ರೀ ಮಠ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿಯವರ ಕರ‍್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆ ಕರ‍್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ, ಶಾಸಕರುಗಳಾದ ಜ್ಯೋತಿ ಗಣೇಶ್, ಸುರೇಶ್‌ಗೌಡ, ಟಿ.ಬಿ.ಜಯಚಂದ್ರ, ಬೆಂಗಳೂರಿನ ಸ್ವಾತಿ ಎಂಟರ್‌ಪ್ರೈಸಸ್ ಮಾಲೀಕ ಹೆಚ್.ಎಸ್. ಸೋಮಶೇಖರ್ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದರು. ಪುಣ್ಯ ಸಂಸರಣೋತ್ಸವ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಶ್ರೀಮಠದ ಆರು ಕಡೆ ದಾಸೋಹಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 11.30 ರಿಂದ ಪ್ರಾರಂಭವಾಗಿದ್ದು, ರಾತ್ರಿ 11 ಗಂಟೆಯವರೆಗೆ ನಿರಂತರ ಅನ್ನ ದಾಸೋಹ ನಿರಂತರವಾಗಿ ನಡೆಯಲಿದೆ.
ಬಿಗಿ ಭದ್ರತೆ: ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ತುಮಕೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ರ‍್ಪಡಿಸಲಾಗಿತ್ತು.
ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಯಚೂರು, ಗುಲ್ರ‍್ಗ, ಧಾರವಾಡ ಮತ್ತಿತರೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಡಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ರ‍್ಶನ ಪಡೆದು ಪುನೀತರಾದರು.
