ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿ ಆಗ್ತಿರೋ ಕರಾವಳಿ ಸಿನಿಮಾ ತಂಡಕ್ಕೆ ಸದ್ಯ ಹೊಸ ಕಲಾವಿದೆಯ ಸೇರ್ಪಡೆ ಆಗಿದೆ. ಇತ್ತಿಚಿಗಷ್ಟೇ ಕರಾವಳಿ ಸಿನಿಮಾತಂಡಕ್ಕೆ ಮಹಾವೀರನಾಗಿ ರಾಜ್ ಬಿ. ಶೆಟ್ಟಿ ಸೇರಿಕೊಂಡಿದ್ರು ಈಗ ರಾಜ್ ಬಿ. ಜೊತೆಯಾಗಿ ಕನ್ನಡದ ಭರವಸೆಯ ನಟಿ ಸುಷ್ಮಿತಾ ಭಟ್ ಅಭಿನಯ ಮಾಡುತ್ತಿದ್ದಾರೆ.. ಸುಷಿತಾ ಭಟ್ ಈಗಾಗಲೇ ಎರಡು ಸಿನಿಮಾದಲ್ಲಿ ನಟಿಸಿದ್ದು ಕರಾವಳಿ ಅವರ ಮೂರನೇ ಸಿನಿಮಾ.
ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೂಟ್‌ಗಳ ಮೂಲಕವೇ ಸದ್ದು ಮಾಡ್ತಿದ್ದ ಸುಷಿತಾ ಭಟ್ ಈಗ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ಸಿನಿಮಾ ತಂಡ ಸುಷಿತಾ ಅವರ ಪಾತ್ರದ ಪೊಸ್ಟರ್ ರಿಲೀಸ್ ಮಾಡಿದ್ದಾರೆ. ಪಕ್ಕ ಮಂಗಳೂರಿನ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ತಿರೋ ಸುಷಿತಾ ಕರಾವಳಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಪ್ರಜ್ವಲ್ ದೇವರಾಜ್, ಸಂಪದಾ, ಮಿತ್ರ, ರಮೇಶ್ ಇಂದಿರ, ಶ್ರೀಧರ್ ಕಾಣಿಸಿಕೊಂಡಿದ್ದಾರೆ.
ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್‌ನಲ್ಲಿ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಸಿನಿಮಾ ಮೂಡಿ ಬರಲಿದೆ.
