Homeರಾಜ್ಯಕೆಪಿಎಸ್‌ಸಿ ನೇಮಕಾತಿ ಪರೀಕ್ಷೆ ಹಗರಣ: ಸಿಬಿಐ ತನಿಖೆಗೆ ಟಿ.ಎ.ಶರವಣ ಒತ್ತಾಯ

ಕೆಪಿಎಸ್‌ಸಿ ನೇಮಕಾತಿ ಪರೀಕ್ಷೆ ಹಗರಣ: ಸಿಬಿಐ ತನಿಖೆಗೆ ಟಿ.ಎ.ಶರವಣ ಒತ್ತಾಯ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ಹಗರಣದ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆ. ಪಿ.ಎಸ್ .ಸಿ. ಕಚೇರಿ ಮುಂಭಾಗದಲ್ಲಿ ಲಾಯರ್ ಅಸೋಸಿಯೇಷನ್ ಜೊತೆಗೂಡಿ ಪ್ರತಿಪಟಿಸಿದರು. ಈ ವೇಳೆ ಪೊಲೀಸರು ಬಂಧಿಸಿ , ನಂತರ ಬಿಡುಗಡೆ ಮಾಡಿದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಯುವಜನರ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರಿ ಉದ್ಯೋಗ ಪಡೆಯುವ ನಿರೀಕ್ಷೆಯಲ್ಲಿರುವ ಸಾವಿರಾರು ಯುವಕ-ಯುವತಿಯರು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಯುವಜನರಲ್ಲಿ ಆತಂಕ ಹಾಗೂ ಅನ್ಯಾಯದ ಭಾವನೆ ಮೂಡಿಸಿವೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ನ್ಯಾಯಸಮ್ಮತ ವ್ಯವಸ್ಥೆ ಇರಬೇಕು. ಪರೀಕ್ಷಾ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ಸತ್ಯಾಂಶವನ್ನು ಸಂಪೂರ್ಣವಾಗಿ ಜನರ ಮುಂದೆ ತರುವ ಅಗತ್ಯವಿದೆ.

ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಕೀಯ ಒತ್ತಡ ಅಥವಾ ಪ್ರಭಾವಕ್ಕೆ ಅವಕಾಶ ನೀಡದೆ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ಸಿಬಿಐ ತನಿಖೆ ನಡೆಸಬೇಕು ಎಂಬ ನಮ್ಮ ಆಗ್ರಹ ಮುಂದುವರಿಯಲಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅವರನ್ನು ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು.

ಯುವಜನರ ಭವಿಷ್ಯವನ್ನು ರಕ್ಷಿಸುವುದು ಮತ್ತು ರಾಜ್ಯದಲ್ಲಿ ನ್ಯಾಯಯುತ ಹಾಗೂ ಪಾರದರ್ಶಕ ನೇಮಕಾತಿ ವ್ಯವಸ್ಥೆಯನ್ನು ಖಚಿತಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಯುವಜನರಿಗೆ ನ್ಯಾಯ ದೊರಕುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ.

RELATED ARTICLES
spot_img

Latest News