Homeಜಿಲ್ಲಾ ಸುದ್ದಿಗಳುನಿಂತಿದ್ದ ಟಾಟಾ ಏಸ್‌‍ ವಾಹನಕ್ಕೆ ಬೈಕ್‌ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ

ನಿಂತಿದ್ದ ಟಾಟಾ ಏಸ್‌‍ ವಾಹನಕ್ಕೆ ಬೈಕ್‌ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ

ಕೊಪ್ಪಳ, ಆ.27- ಒಂದೇ ಬೈಕ್‌ನಲ್ಲಿ ಮೂವರು ಯುವಕರು ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿ ನಿಂತಿದ್ದ ಟಾಟಾ ಏಸ್‌ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನರಗುಂದ ಮೂಲದ ಮಾಬೂಸಾಬ್ ಬುಡನ್‌ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಮೃತಪಟ್ಟ ದುರ್ದೈವಿಗಳು.

ನಿನ್ನೆ ಮಧ್ಯಾಹ್ನ ಈ ಮೂವರು ನರಗುಂದದಿಂದ ಕೊಪ್ಪಳದ ಕಡೆಗೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 63ರ ಬನ್ನಿಕೊಪ್ಪ ಗ್ರಾಮದ ಬಳಿ ನಿಂತಿದ್ದ ಟಾಟಾ ಏಸ್‌ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಕುಕನೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News