ನಂಜನಗೂಡು, ಡಿ.31– ನಗರದ ಹೊರವಲಯದ ಕೋರೆಹುಂಡಿಗೆ ತೆರಳುವ ರಸ್ತೆಯಲ್ಲಿ ಬೈಕ್ ಸಮೇತ ಯುವಕನೊಬ್ಬನ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲೂಕಿನ ರಾಂಪುರ ಗ್ರಾಮದ ನಿವಾಸಿ ಆದಿತ್ಯ(23) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ನಂಜನಗೂಡಿನಿಂದ ಕೋರೆಹುಂಡಿಗೆ ತೆರಳುವ ರಸ್ತೆಯಲ್ಲಿರುವ ಹುಲ್ಲಹಳ್ಳಿ ನಾಲೆ ಸಮೀಪದ ನಿರ್ಜನ ಪ್ರದೇಶದಲ್ಲಿ ಬೈಕ್ ಹಾಗೂ ಆದಿತ್ಯನ ಶವ ಸಂಪೂರ್ಣ ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಖಾಸಗಿ ಕಾರ್ಖಾನೆಯೊಂದರಲ್ಲಿ ಗುತ್ತಿಗೆ ಆಧಾರದ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಈತ ತನ್ನ ಬೈಕ್ ರಿಪೇರಿ ಮಾಡಿಸುತ್ತೇನೆ ಎಂದು ಮನೆಯಿಂದ ಹೋದವನು ವಾಪಸ್ ಬಂದಿರಲಿಲ್ಲ. ರಾತ್ರಿ 7 ಗಂಟೆ ಸಮಯದಲ್ಲಿ ಬೈಕ್ ಸಮೇತ ಬೆಂಕಿಗೆ ಆಹುತಿಯಾಗಿರುವುದಾಗಿ ಪರಿಚಿತರು ಪೋನ್ ಮೂಲಕ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಪೋಷಕರು ಮಗನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ನಂಜನಗೂಡು ಗ್ರಾಮಾಂತರ ಠಾಣೆಗೆ ಪೊಲೀಸರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಿ ತನಿಖೆ ಕೈಗೊಂಡಿದ್ದಾರೆ.
ನಿರ್ಜನ ಪ್ರದೇಶದಿಂದ ಆದಿತ್ಯ ಚಲಿಸುವ ಬೈಕ್ ನಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಯುವಕನ ಸಾವು ಆಕಸಿಕವೋ ಅಥವಾ ಕೊಲೆಯೋ ಎಂಬ ಸತ್ಯ ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.
