ಇಂದಿನಿಂದರಾಜ್ಯದಲ್ಲಿ ಕಡಿಮೆಯಾಗಲಿದೆ ಮಳೆಯ ಅಬ್ಬರ

ಬೆಂಗಳೂರು,ಅ.24- ಕಳೆದ ಎಂಟ್ಹತ್ತು ದಿನಗಳಿಂದ ಸುರಿಯುತ್ತಿರುವ ಮಳೆ ಪ್ರಮಾಣ ತಗ್ಗಿದ್ದು, ಇಂದಿನಿಂದ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ. ಕನ್ಯಾಕುಮಾರಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ನಿನ್ನೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಗರಿಷ್ಠ 6 ಸೆಂ.ಮೀ.ನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಪುತ್ತೂರು … Continue reading ಇಂದಿನಿಂದರಾಜ್ಯದಲ್ಲಿ ಕಡಿಮೆಯಾಗಲಿದೆ ಮಳೆಯ ಅಬ್ಬರ