Wednesday, May 1, 2024
Homeರಾಜ್ಯBREAKING: ರೈತರಿಗೆ ಸಿಹಿಸುದ್ದಿ ಕೊಟ್ಟ ಸಿಎಂ, ಸಹಕಾರ ಬ್ಯಾಂಕುಗಳ ಬಡ್ಡಿ ಸಂಪೂರ್ಣ ಮನ್ನಾ

BREAKING: ರೈತರಿಗೆ ಸಿಹಿಸುದ್ದಿ ಕೊಟ್ಟ ಸಿಎಂ, ಸಹಕಾರ ಬ್ಯಾಂಕುಗಳ ಬಡ್ಡಿ ಸಂಪೂರ್ಣ ಮನ್ನಾ

ಬೆಳಗಾವಿ, ಡಿ.15- ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವ ಮತ್ತು ದೀರ್ಘಾವ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡಿದ ಅವರು, ರೈತರ ಸಾಲ ಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ.

ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ ಎಂದು ಪ್ರಶ್ನಿಸಿದರು.

ಯಡಿಯೂರಪ್ಪನವರು 2019 ರ ಆಗಸ್ಟ್‍ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ ಎಂದು ಹೇಳಿದ್ದರು. ಇದೇ ರೀತಿ ಈ ಹಿಂದೆಯೂ ಹೇಳಿದ್ದರು ಎಂದು ಟೀಕಿಸಿದರು.

ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು.

ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆಗಳು, ಆತಂಕ ವ್ಯಕ್ತಪಡಿಸಿದ ವೈದ್ಯರು

ಧಾರವಾಡ ಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು 1255 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ ಎಂದು ಪ್ರಕಟಿಸಿದರು.

ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು. ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ.

ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮ ವಹಿಸುತ್ತೇವೆ ಎಂದು ಹೇಳಿದರು.
ಧಾರವಾಡದಲ್ಲಿರುವ ವಾಲ್ಮಿ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಯನ್ನು ಉನ್ನತೀಕರಿಸಲಾಗುವುದು. ಇದರ ಮೂಲಕ ಜಲ ಶಿಕ್ಷಣ ನೀಡುವುದಷ್ಟೆ ಅಲ್ಲ, ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

RELATED ARTICLES

Latest News