Monday, February 26, 2024
Homeರಾಷ್ಟ್ರೀಯಮತದಾರರಿಗೆ ಧನ್ಯವಾದ ಅರ್ಪಿಸಿದ ಶಿವರಾಜ್ ಸಿಂಗ್ ಚೌಹಾಣ್

ಮತದಾರರಿಗೆ ಧನ್ಯವಾದ ಅರ್ಪಿಸಿದ ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್,ಡಿ.3- ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. 230 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 124 ಸ್ಥಾನಗಳಿಗೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಮತ್ತೆ ಸರ್ಕಾರ ರಚಿಸಲು ಆಶೀರ್ವಾದ ಮಾಡಿರುವ ರಾಜ್ಯದ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಜನರ ಆಶೀರ್ವಾದ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದೊಂದಿಗೆ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರವನ್ನು ರಚಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಚೌಹಾಣ್ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ,

ನಾಲ್ಕಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಜೀವ ದಹನ, ಮೂವರ ರಕ್ಷಣೆ

ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಜನರ ನಂಬಿಕೆ ಬಿಜೆಪಿಯೊಂದಿಗಿರುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಸಂಪೂರ್ಣ ಫಲಿತಾಂಶ ಬರುವವರೆಗೆ ನಾವು ಕಾಯುತ್ತೇವೆ. ನಾವು ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತೇವೆ. ಜನರು ಪ್ರಧಾನಿ ಮತ್ತು ಕಲ್ಯಾಣ ಯೋಜನೆಗಳು ಇಂತಹ ಜನಾದೇಶಕ್ಕೆ ಕಾರಣವಾಗಿವೆ ಎಂದಿದ್ದಾರೆ.

RELATED ARTICLES

Latest News