ಶಾಸಕರ ಹನಿಟ್ರ್ಯಾಪ್ ಯತ್ನ ಪ್ರಕರಣದ ತನಿಖೆಗೆ 2 ವಿಶೇಷ ತಂಡ ರಚನೆ

Social Share

ಚಿತ್ರದುರ್ಗ,ಅ.3- ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಪೊಲೀಸರ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯಪೊಲೀಸ್ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ .


ಸುದ್ದಿಗಾರರ ಜೊತೆ ಮಾತನಾಡಿದ ಅವರು, ಒಂದು ತಂಡ ಬೇರೆ ರಾಜ್ಯಕ್ಕೆ ತೆರಳಿ ಕಾರ್ಯಾಚರಣೆ ಪ್ರಾರಂಭಿದ್ದು, ತನಿಖೆ ಚುರುಕುಗೊಂಡಿದೆ ಎಂದು ತಿಳಿಸಿದರು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ನಾನು ಮಾತನಾಡಲ್ಲ. ಜನರಲ್ಲಿ ಸೈಬರ್ ಕ್ರೈಂ ಬಗ್ಗೆ ಅರಿವು ಕೊರತೆ ಇದೆ,ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ 97 ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿವೆ. ಇದರ ನಿಯಂತ್ರಣಕ್ಕೆ ಕ್ರಮ ವಹಿಸಬೇಕಿದೆ. ಸಾಮಾಜಿಕ ಜಾಲತಾಣಗಳ ಬಗ್ಗೆ ನಿಗಾ ವಹಿಸಿ ಸೈಬರ್ ಕ್ರೈಂ ತಡೆಗಟ್ಟುವ ಕೆಲಸ ಆಗಬೇಕಿದೆ ಎಂದರು.
ಸಾರ್ವಜನಿಕ ವಲಯದಲ್ಲಿ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ.

ದುಷ್ಕರ್ಮಿಗಳು ಅಮಾಯಕರನ್ನು ಬಲೆಗೆ ಬೀಳಿಸುವುದಕ್ಕೆ ಕಾಯುತ್ತಿರುತ್ತಾರೆ. ಚಾಟ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಾರೆ. ಇದರ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಅಲೋಕ್ ಕುಮಾರ್ ಹೇಳಿದರು.

ಗುಜರಾತ್ ವಿಧಾನಸಭೆ ಚುನಾವಣೆಗೆ ಮಹೂರ್ತ ಫಿಕ್ಸ್, 2 ಹಂತದಲ್ಲಿ ಮತದಾನ

ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಜನರು ಕೂಡ ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಮ್ಮಅಧಿಕಾರಿಗಳಿಗೂ ಈ ಬಗ್ಗೆ ತನಿಖೆ ನಡೆಸಿ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು. ಕೋಟೆನಾಡು ಚಿತ್ರದುರ್ಗದಲ್ಲಿ ವಾಸ್ತವ್ಯ ಹೂಡಿರುವ ಅವರು, ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಪರೇಡ್ ವೀಕ್ಷಿಸಿದರು.

ಪೊಲೀಸ್ ಪರೇಡ್ ವೇಳೆ ಉತ್ತಮ ಪರೇಡ್ ಮಾಡಿದ ಟೀಮ್ ಗೆ ಮೆಚ್ಚುಗೆ ವ್ಯಕ್ತಪಡಿಸಿ ರಘು ಮತ್ತು ಬಾಹುಬಲಿ ನೇತೃತ್ವದ ತಂಡಕ್ಕೆ ಸ್ವತಃ ಗೌರವ ಧನ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಪರೇಡ್ ಬಳಿಕ ಪೊಲೀಸರಿಗೆ ಫಿಟ್ನೆಸ್ ಪಾಠ ಮಾಡಿದರು.

ಮಂಗಳಮುಖಿಯರಿಗೆ ಸರ್ಕಾರದಿಂದ ಜಮೀನು, ದೇಶದಲ್ಲೇ ಮೊದಲು

ಈ ವೇಳೆ ಪೂರ್ವ ವಲಯ ಐಜಿಪಿ ತ್ಯಾಗರಾಜï, ಎಸ್ಪಿ ಕೆ.ಪರಶುರಾಮ್ ಉಪಸ್ಥಿತರಿದ್ದರು. ಇದೇ ವೇಳೆ ಚಿತ್ರದುರ್ಗದ ಪೊಲೀಸ್ ವಸತಿ ಗೃಹಕ್ಕೆ ಭೇಟಿ ನೀಡಿ ಪೊಲೀಸರ ಕುಟುಂಬಸ್ಥರ ಜೊತೆ ಸಭೆ ನಡೆಸಿ ಕುಟುಂಬಸ್ಥರಿಂದ ಅಹವಾಲು ಆಲಿಸಿದರು.

Articles You Might Like

Share This Article