ಅನಂತ್‍ಕುಮಾರ್ ಹೆಗಡೆಯವರನ್ನು ಪಕ್ಷದಿಂದ ಹೊರಹಾಕಿ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾ.11- ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ನರೇಂದ್ರಮೋದಿಯವರು ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದಿದ್ದಾರೆ. ಆದರೆ ಅವರ ಪಕ್ಷದ ಸಂಸದರೊಬ್ಬರು ಪದೇಪದೇ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು. ನಾನು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. … Continue reading ಅನಂತ್‍ಕುಮಾರ್ ಹೆಗಡೆಯವರನ್ನು ಪಕ್ಷದಿಂದ ಹೊರಹಾಕಿ : ಗೃಹ ಸಚಿವ ಪರಮೇಶ್ವರ್