ಬೆಂಗಳೂರು,ಡಿ.25- ರಾಜ್ಯದ್ಯಾಂತ ಭಾರೀ ವಿವಾದದ ಕಿಡಿ ಹೊತ್ತಿಸಿರುವ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ನಾವು ಆಳವಾಗಿ ಪರಿಶೀಲಿಸಿದ ನಂತರ ನಿರ್ಬಂಧಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ನಿಷೇಧವನ್ನು ಹಿಂಪಡೆಯುವುದಾಗಿ ಹೇಳಿದ್ದು, ಭಾರೀ ವಿವಾದವನ್ನೇ ಸೃಷ್ಟಿಸಿದೆ.
ಇದೀಗ ಹಿಜಾಬ್ ನಿಷೇಧದ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆ, ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ನಾವು ಹಿಜಾಬ್ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದರು. ನಾವು ಎಲ್ಲಾ ಆಯಮಗಳಲ್ಲಿ ಪರಿಶೀಲಿಸುತ್ತೇವೆ. ಇದನ್ನು ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಈ ವಿಷಯಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ. ಆದರೆ ಅದು ಕೆಲಸ ಮಾಡುವುದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಸುವ ಆದೇಶವನ್ನು ತಮ್ಮ ಸರ್ಕಾರ ಹಿಂಪಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದ ನಂತರ ಕರ್ನಾಟಕದಲ್ಲಿ ರಾಜಕೀಯ ಸಂಘರ್ಷವೇ ಎದ್ದಿದೆ.
ಬಟ್ಟೆಯ ಆಯ್ಕೆ ಒಬ್ಬರ ಸ್ವಂತ ಹಕ್ಕು. ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳಲು ನಾನು ನಿರ್ದೇಶನ ನೀಡಿದ್ದೇನೆ. ಪ್ರಧಾನಿ ಮೋದಿಯವರ ¿ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಿಜೆಪಿಯು ಬಟ್ಟೆ, ಉಡುಗೆ ಮತ್ತು ಜಾತಿಯ ಆಧಾರದ ಮೇಲೆ ಜನರು ಮತ್ತು ಸಮಾಜವನ್ನು ವಿಭಜಿಸುತ್ತಿದೆ ಎಂದು ಮೈಸೂರು ಜಿಲ್ಲೆ ನಂಜನಗೂಡಿನ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು.
ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ವೈಫಲ್ಯಗಳನ್ನು ಮರೆಮಾಚುವ ಜತೆಗೆ ಕೇವಲ ರಾಜಕೀಯ ಲಾಭಕ್ಕಾಗಿ ಈ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದರು.
ವಿಧಾನಪರಿಷತ್ ವಿಪಕ್ಷ ನಾಯಕ-ಉಪನಾಯಕರನ್ನು ನೇಮಿಸಿದ ಬಿಜೆಪಿ, ಯತ್ನಾಳ್‌ಗೆ ಮತ್ತೆ ಹಿನ್ನಡೆ
ರಾಜ್ಯದಾದ್ಯಂತ ಹಿಜಾಬ್ ಅನ್ನು ನಿಷೇಸಲಾಗಿಲ್ಲ ಆದರೆ ಡ್ರೆಸ್ ಕೋಡ್ ಇರುವಲ್ಲಿ ಅನುಮತಿಸುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಎಲ್ಲೆಡೆ ಹಿಜಾಬ್ ಧರಿಸಲು ಅನುಮತಿ ಇದೆ.ಹಿಜಾಬ್ ಅನ್ನು ನಿಷೇಸದಿರುವಾಗ ನಿಷೇಧವನ್ನು ತೆಗೆದುಹಾಕುವ ಪ್ರಶ್ನೆ ಎಲ್ಲಿದೆ ಎಂದು ಪ್ರಶ್ನಿಸಿದ್ದರು.
ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಸಿಎಂ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಹೊಸ ಧರ್ಮ ದಂಗಲ್ ಶುರುವಾಗುವ ಆತಂಕ ಎದುರಾಗಿದೆ. ಈ ಬೆಳವಣಿಗೆಯಿಂದ ಸದ್ಯಕ್ಕೆ ವಿವಾದವನ್ನು ತಣ್ಣಗಾಗಿಸಲು ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಲಭಿಸಿದೆ.
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಸದ್ಯಕ್ಕೆ ಯಾವುದೇ ಅಕೃತ ಆದೇಶ ಬೇಡ ಎಂದು ಸಚಿವರು ಮನವಿ ಮಾಡಿದ್ದಾರೆ. ಹಿಜಾಬ್ ನಿಷೇಧದ ಆದೇಶ ಹೊರಡಿಸಿದರೆ ಶಾಲೆಗಳಲ್ಲಿ ಕೇಸರಿ ಶಾಲ್ ಅಭಿಯಾನ ಜೋರಾಗಬಹುದು ಎಂದು ಸಿದ್ದರಾಮಯ್ಯ ಸಂಪುಟ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದರೂ ಏನೇ ಆದರೂ ನಮಗಾಗುವ ರಾಜಕೀಯ ಲಾಭ ಇಷ್ಟೆ. ಅದಕ್ಕೆ ಪರ್ಯಾಯವಾಗಿ ಆದೇಶ ಹೊರಡಿಸಿದರೆ ಬಿಜೆಪಿಗೆ ಆಗುವ ಲಾಭವೇ ಹೆಚ್ಚಾಗುತ್ತದೆ. ಹೀಗಾಗಿ ಸದ್ಯಕ್ಕೆ ಯಾವ ಆದೇಶವೂ ಬೇಡ, ಯಾವುದೇ ಘೋಷಣೆ ಬೇಡ ಎಂದು ಸಚಿವರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
ಹಿಜಬ್ ನಿಷೇಧ ಆದೇಶ ವಾಪಸ್ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಮಾಡಿದ್ದರು. ಹೀಗಾಗಿ ಅಕೃತ ಆದೇಶ ಇದುವರೆಗೂ ಮಾಡಿಲ್ಲ, ಆದರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಈ ರಿಸ್ಕ್ ಬೇಡ ಎಂಬ ಒತ್ತಡ ತರತೊಡಗಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಘೋಷಣೆ ನಂತರವೂ ಅಧಿಕೃತ ಆದೇಶಕ್ಕೆ ಸ್ವತ: ಸಂಪುಟ ಸಹುದ್ಯೋಗಿಗಳಿಂದಲೇ ವಿರೋಧ ವ್ಯಕ್ತವಾಗತೊಡಗಿದೆ ಎನ್ನಲಾಗಿದೆ.
ಫೆಬ್ರವರಿ 2022ರಲ್ಲಿ, ರಾಜ್ಯದ ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜು ತರಗತಿಯೊಳಗೆ ಹಿಜಾಬ್ ಅನ್ನು ನಿಷೇಸಿತು ಮತ್ತು ಅನೇಕ ಇತರ ಸಂಸ್ಥೆಗಳು ಇದನ್ನು ಅನುಸರಿಸಿದವು. ನಂತರ ಆಗಿನ ಬಸವರಾಜ ಬೊಮ್ಮಾಯಿ ಸರ್ಕಾರವು ಕ್ಯಾಂಪಸ್ಗಳಲ್ಲಿ ಹಿಜಾಬ್ ಅನ್ನು ನಿಷೇಸುವ ಆದೇಶವನ್ನು ಹೊರಡಿಸಿತು, ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಉಡುಪುಗಳನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದೆ.
ಈ ಆದೇಶವು ಅನೇಕ ಪ್ರತಿಭಟನೆಗಳು ಮತ್ತು ಅಶಾಂತಿಗೆ ಕಾರಣವಾಯಿತು, ಇದು ರಾಜ್ಯದಲ್ಲಿ ಸಂಸ್ಥೆಗಳನ್ನು ಮುಚ್ಚಲು ಕಾರಣವಾಯಿತು. ವಿಷಯವು ಸುಪ್ರೀಂ ಕೋರ್ಟ್ಗೆ ತಲುಪಿತು, ಅದು ಕಳೆದ ವರ್ಷ ಅಕ್ಟೋಬರ್ 13ರಂದು ವಿಭಜನೆಯ ತೀರ್ಪು ಪ್ರಕಟಿಸಿತು. ವಿಭಾಗೀಯ ಪೀಠವು ಈ ವಿಷಯವನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸಲು ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿತು ಮತ್ತು ಅದು ಉನ್ನತ ನ್ಯಾಯಾಲಯದ ಮುಂದೆ ಹಿಜಾಬ್ ಕೇಸು ಇನ್ನೂ ಬಾಕಿ ಉಳಿದಿದೆ.