ಗದಗ, ಜೂ.24-ಜಿಲ್ಲೆಯ ಗಜೇಂದ್ರ ಗಡ ತಾಲ್ಲೂಕಿನ ಚಿಲಝರಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಶಾಲೆಯ 6ನೇ ತರಗತಿ ಕೊಠಡಿಯಲ್ಲಿ ಪಾಠ ಮಾಡುವಾಗ ಮೇಲ್ಟಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ.
ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಛಾವಣಿ ಕುಸಿತದಿಂದ ಹಲವು ಡೆಸ್ಕ್ಗಳು, ಬೆಂಚುಗಳು ಸೇರಿದಂತೆ ಪೀಠೋಪಕರಣಗಳಿಗೂ ಹಾನಿಯಾಗಿದೆ. ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಶಿಕ್ಷಕನಿಗೆ ಗಾಯಗಳಾಗಿವೆ. ಬಿಇಒ ಅಥವಾ ಬೇರೆ ಯಾರಾದರೂ ದೂರು ದಾಖಲಿಸಿದರೆ, ಕೇಸ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುದು ಎಂದು . ಗದಗ ಎಸ್ ಪಿ ತಿಳಿಸಿದ್ದಾರೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ