ವರ್ಷದೊಳಗೆ ರಾಜ್ಯದ 7 ಜಿಲ್ಲೆಗಳಲ್ಲಿ ಗಾಂಧಿಭವನ ನಿರ್ಮಾಣ : ಬೊಮ್ಮಾಯಿ

Social Share

ಬೆಂಗಳೂರು,ಅ.2- ರಾಜ್ಯದ ಏಳು ಜಿಲ್ಲೆಗಳಲ್ಲಿ ಇನ್ನೊಂದು ವರ್ಷದಲ್ಲಿ ಗಾಂಧಿ ಭವನ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸಂಯುಕ್ತ ಆಶ್ರಯದಲ್ಲಿ ಮಹತ್ವ ಗಾಂಧಿಜಿಯವರ ಜನ್ಮ ದಿನಾಚರಣೆ ಅಂಗವಾಗಿ ಪ್ರಖ್ಯಾತ ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ರಾಜ್ಯದ 23 ಜಿಲ್ಲೆಗಳಲ್ಲಿ ಈಗಾಗಲೇ ಗಾಂಧಿಭವನವನ್ನು ನಿರ್ಮಾಣ ಮಾಡಲಾಗಿದೆ. ಉಳಿದ 7 ಜಿಲ್ಲೆಗಳಲ್ಲಿ ಇನ್ನೊಂದು ವರ್ಷದಲ್ಲಿ ಗಾಂಧಿ ಭವನ ನಿರ್ಮಾಣ ಮಾಡಲು ಎಲ್ಲ ರೀತಿಯ ವ್ಯವಸ್ಥೆ ನಿರ್ಮಾಣ ಮಾಡಲಾಗುವುದು ಎಂದರು.

ಜಿಲ್ಲೆಗಳಲ್ಲಿ ಗಾಂಭವನ ನಿರ್ಮಾಣಕ್ಕೆ ಬೇಕಾದ ನಿವೇಶನ ಮತ್ತು ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಖಾದಿ ಗ್ರಾಮೀಣ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡಲು ವಿಶೇಷ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮಾರುಕಟ್ಟೆ ಒದಗಿಸಲಾಗುವುದು ಎಂದರು.

ಡಿಜಿಟಲ್ ಕ್ರಾಂತಿಯಿಂದ ಗ್ರಾಮಗಳ ಅಭಿವೃದ್ದಿಯಾಗುತ್ತಿದ್ದು, ತಂತ್ರಜ್ಞಾನದಿಂದ ಕ್ರಾಂತಿಯಿಂದ ಸರ್ಕಾರದ ಹಲವು ಸೇವೆಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಜನರ ಸುತ್ತ ಅಭಿವೃದ್ದಿಯಾಗಬೇಕೆ ಹೊರತು ಅಭಿವೃದ್ದಿ ಸುತ್ತ ಜನರು ಸುತ್ತಬಾರದು. ಗ್ರಾಮ ಸ್ವರಾಜ್ಯದಿಂದ ಹಳ್ಳಿಗಳ ಬದಲಾವಣೆಯಾಗಬೇಕು. ಗ್ರಾಮ ಮಟ್ಟದಲ್ಲಿ ಸ್ಥಳೀಯ ಮುಖಂಡರಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದರು.

ಪ್ರಶಸ್ತಿಯ ಮೊತ್ತ 5 ಲಕ್ಷ ರೂ.ಗಳನ್ನು ನಿಮ್ಹಾನ್ಸ್‍ಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕøತ ಡಾ.ಸಿ.ಆರ್.ಚಂದ್ರಶೇಖರ್ ಘೋಷಿಸಿದರು. ನಿವೃತ್ತಿಯ ನಂತರ ಬಂದ 1.09 ಕೋಟಿ ರೂ. ಎರಡು ಮನೆ, ನಿವೇಶಗಳನ್ನು ಸಹ ಒದಗಿಸುವುದಾಗಿ ಅವರು ಹೇಳಿದರು.

ಮಾನಸಿಕ ಆರೋಗ್ಯ ಕ್ಷೇತ್ರ ಅತ್ಯಂತ ನಿರ್ಲಕ್ಷಿತವಾಗಿದ್ದು, ಇದಕ್ಕೆ ವಿಶೇಷ ಒತ್ತು ನೀಡಬೇಕು. ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್, ಸಚಿವರಾದ ಆರಗ ಜ್ಞಾನೇಂದ್ರ ಗೋವಿಂದ ಕಾರಜೋಳ, ಎಂ.ಟಿ.ಬಿ.ನಾಗರಾಜ್, ಮಾಜಿ ಸಚಿವ ಎಚ್.ಕೆ.ಪಾಟೀಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಕರ್ನಾಟಕ ಗಾಂಧಿ ಸ್ಮಾರಕ ನಿಯ ಅಧ್ಯಕ್ಷ ವೂಡೇ ಪಿ.ಕೃಷ್ಣ , ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಸುಮಂಗಲಿ ಸೇವಾ ಸಂಘದ ಅಧ್ಯಕ್ಷ ಸುಶೀಲಮ್ಮ ಮತ್ತಿತರರು ಇದ್ದರು.

Articles You Might Like

Share This Article