ಭೂಪಾಲ್,ಜ.5- ಮಾನಸಿಕ ಒತ್ತಡವನ್ನು ಸಹಿಸಲಾಗುತ್ತಿಲ್ಲ ಎಂದು ಪತ್ರ ಬರೆದಿಟ್ಟು ವೈದ್ಯಕೀಯ ಸ್ನಾತಕ್ಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅರವಳಿಕೆ ಇಂಜೆಕ್ಷನ್ ಚುಚ್ಚಿಕೊಂಡು ಹಾಸ್ಟೇಲ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.
ಮಧ್ಯ ಪ್ರದೇಶದ ಭೂಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ಮೆಡಿಕಲ್ ಕಾಲೇಜಿನಲ್ಲಿ ಮಕ್ಕಳ ತಜ್ಞತೆಯಲ್ಲಿ ಸ್ನಾತಕ್ಕೋತ್ತರ ಪದವಿಗಾಗಿ ಒಂದು ತಿಂಗಳ ಹಿಂದೆ ದಾಖಲಾಗಿದ್ದ ಆಕಾಂಕ್ಷ ಮಹೇಶ್ವರಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ 7 ಗಂಟೆಗೆ ಪೋಷಕರ ಜೊತೆ ಮಾತನಾಡಿದ್ದಾಳೆ, ನಂತರ 2.5ಎಂ.ಎಲ್.ನಷ್ಟು ನಾಲ್ಕು ಡೋಸ್ ಅರವಳಿಕೆಯನ್ನು ಚುಚ್ಚಿಕೊಂಡಿದ್ದಾರೆ. ರೂಂನಲ್ಲಿ ಖಾಲಿ ಸಿರಿಂಜ್ ಮತ್ತು ಔಷಧಿಯ ಬಾಟಲ್ ಪತ್ತೆಯಾಗಿದೆ.
ಬೆಂಗಳೂರು-ಮೈಸೂರು ದಶಪಥದ ಹೆದ್ದಾರಿ ಅಸುರಕ್ಷ : ಜೆಡಿಎಸ್
ಬುಧವಾರ ಬೆಳಗ್ಗೆ ಆಕೆ ರೂಂನಿಂದ ಹೊರ ಬರದಿರುವುದನ್ನು ಅಕ್ಕ ಪಕ್ಕದ ಹಾಸ್ಟೇಲ್ ಸಹವರ್ತಿಗಳು ಗಮನಿಸಿದ್ದಾರೆ. ಸಂಜೆ ವಾಪಾಸ್ ಬಂದಾಗಲೂ ಆಕೆಯ ಕೊಠಡಿಯ ಬಾಗಿಲು ಹಾಕಿರುವುದನ್ನು ಗಮನಿಸಿ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಕಾಲೇಜು ಆಡಳಿತ ಮಂಡಳಿ ದೂರಿನ ಮೇರೆಗೆ ಪೆಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಗಿಲು ಹೊಡೆದು ಒಳ ಹೋಗಿ ನೋಡಿದಾಗ ಆಕಾಂಕ್ಷಾ ಮೃತಪಟ್ಟಿರುವುದು ಖಚಿತವಾಗಿದೆ.
ಕೊಠಡಿಯಲ್ಲಿ ಪತ್ರವೊಂದು ದೊರೆತಿದೆ. ನಾನು ಮಾನಸಿಕವಾಗಿ ಸದೃಢವಾಗಿಲ್ಲ ಮತ್ತು ಉದ್ವೇಗಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಅತಿರೇಕದ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರು ಕಾರಣರಲ್ಲ, ನನ್ನ ವೈಯಕ್ತಿಕ ಕಾರಣಗಳಿಂದ ಸಾವನ್ನಪ್ಪುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದಾಗಿ ಕೋ-ಎ-ಫಿಜಾ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವಿಜಯ್ ಸಿಸೋಡಿಯಾ ತಿಳಿಸಿದ್ದಾರೆ.
XBB.1.5 ವೈರಸ್ ಭಯ ಬೇಡ, ಆದರೆ, ಅನಗತ್ಯವಾಗಿ ಮನೆಯಿಂದ ಹೊರಹೋಗಬೇಡಿ
ಆಕೆಯೇ ಸ್ವಯಂ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದೇವೆ ಎಂದು ತಿಳಿಸಿದ್ದಾರೆ.
Gandhi Medical College, PG student, commits, suicide,